ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆಯ ನಡುವೆ ಡಿಸಿಎಂ ಡಿಕೆ ಶಿವಕುಮಾರ್ ಅವರ ಪರವಾಗಿ ಸಹೋದರ ಡಿಕೆ ಸುರೇಶ್ ಅವರು ಅಖಾಡಕ್ಕೆ ಇಳಿದಿದ್ದಾರೆ. ದೆಹಲಿಯಲ್ಲಿ ಹೈಕಮಾಂಡ್ ನಾಯಕರು ಸಭೆ ನಡೆಸುತ್ತಿರುವ ಸಂದರ್ಭದಲ್ಲಿ ಡಿಕೆ ಸುರೇಶ್ ಅವರು ದೆಹಲಿಗೆ ತೆರಳಿದ್ದಾರೆ.
ತಂತ್ರಕ್ಕೆ ಪ್ರತಿ ತಂತ್ರಗಳನ್ನು ಎರಡು ಬಣ ಹೂಡುತ್ತಿದೆ. ದೆಹಲಿಗೆ ರಾಜ್ಯ ನಾಯಕರು ತೆರಳುವುದಕ್ಕೂ ಮೊದಲೇ ಡಿಕೆ ಸುರೇಶ್ ದಿಲ್ಲಿ ವಿಮಾನ ಏರಿದ್ದಾರೆ. ಡಿಕೆ ಶಿವಕುಮಾರ್ ಅವರ ಪರವಾಗಿ ಸಂದೇಶ ರವಾನೆ ಮಾಡುವ ಉದ್ದೇಶ ಇದ್ಯಾ ಎಂಬುದು ಇದೀಗ ಚರ್ಚೆಗೆ ಕಾರಣವಾಗುತ್ತಿದೆ.
ಅಧಿಕಾರ ಹಸ್ತಾಂತರ ಜಟಾಪಟಿ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ಕೊನೆಯ ಹಂತದ ಕಸರತ್ತು ನಡೆಸುತ್ತಿದ್ದಾರೆ. ದೆಹಲಿಯಲ್ಲಿ ಶನಿವಾರ ಸರಣಿ ಸಭೆ ನಡೆಯುವ ಸಾಧ್ಯತೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರಿಗೆ ಬುಲಾವ್ ಬರುವ ಸಾಧ್ಯತೆ ದಟ್ಟವಾಗಿದೆ.
ಹೀಗಾಗಿ ಒತ್ತಡ ತಂತ್ರವನ್ನು ಉಭಯ ಬಣ ಶುರುಮಾಡುತ್ತಿದೆ. ಈಗಾಗಲೇ ಸ್ವಾಮೀಜಿಗಳು, ಮಠಾಧಿಪತಿಗಳು ಹಾಗೂ ಸಮುದಾಯದ ಮುಖಂಡರು ಅಖಾಡಕ್ಕೆ ಇಳಿದಿದ್ದಾರೆ. ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಪರವಾಗಿ ಹೇಳಿಕೆಯನ್ನು ಕೊಡಲು ಶುರು ಮಾಡಿದ್ದಾರೆ.
ವರದಿ: ರಂಜಿತ ರೇವಣ್ಣ ನಾಟನಹಳ್ಳಿ

