- Advertisement -
ತುಮಕೂರು ಜಿಲ್ಲೆಯ ಕುಣಿಗಲ್ ಶಾಸಕ ಡಾ. H.D. ರಂಗನಾಥ್ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಲೆಂದು ಪ್ರಾರ್ಥನೆ ಸಲ್ಲಿಸುವ ಉದ್ದೇಶದಿಂದ ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಎಡೆಯೂರುದಲ್ಲಿ ವಿಶೇಷ ಮೃತ್ಯುಂಜಯ ಹೋಮ ನೆರವೇರಿಸಿದರು.
ಎಡೆಯೂರಿನ ಶ್ರೀ ಸಿದ್ಧಲಿಂಗೇಶ್ವರ ದೇವಾಲಯದ ಸಮೀಪದಲ್ಲಿ ನಡೆದ ಈ ಹೋಮ ಕಾರ್ಯಕ್ರಮದಲ್ಲಿ 1001 ತೆಂಗಿನಕಾಯಿಗಳನ್ನು ಹೊಡೆದು ಹರಕೆಯನ್ನು ನೆರವೇರಿಸಲಾಯಿತು. ದೇವಾಲಯದಲ್ಲಿ ವಿಶೇಷ ಪೂಜೆ, ಸಂಪ್ರದಾಯಬದ್ಧ ವಿಧಿವಿಧಾನಗಳೊಂದಿಗೆ ಹೋಮ-ಹವನಗಳು ಜರುಗಿದವು.
ಡಾ. ರಂಗನಾಥ್ ಅವರು, ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ನಾಯಕತ್ವ ಚರ್ಚೆಯ ನಡುವೆ, ಡಿ.ಕೆ.ಶಿವಕುಮಾರ್ ಅವರ ನಾಯಕತ್ವಕ್ಕಾಗಿ ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾಗಿ ತಿಳಿಸಿದರು.
ವರದಿ : ಲಾವಣ್ಯ ಅನಿಗೋಳ
- Advertisement -

