ದೆಹಲಿಯಲ್ಲಿ ರಾಜ್ಯ ರಾಜಕಾರಣದ ಬಗ್ಗೆ ಬಿಸಿ ಬಿಸಿ ಚರ್ಚೆ ಆಗಿದೆ. ಕರ್ನಾಟಕದಲ್ಲಿ ಬ್ರೇಕ್‌ಫಾಸ್ಟ್ ಮೀಟಿಂಗ್ ನಡೆಯುತ್ತಿದ್ದಂತೆ, ದಿಲ್ಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂಸದ ರಾಹುಲ್ ಗಾಂಧಿ ಸೀಕ್ರೆಟ್ ಮೀಟಿಂಗ್ ಮಾಡಿದ್ದಾರೆ. ಖರ್ಗೆ ನಿವಾಸಕ್ಕೇ ರಾಗಾ ಭೇಟಿ ನೀಡಿದ್ದು, ಭಾರೀ ಕುತೂಹಲ ಮೂಡಿಸಿದೆ. ಸುಮಾರು 45 ನಿಮಿಷಗಳ ಕಾಲ ಮಹತ್ವದ ಮಾತುಕತೆ ಆಗಿದೆ.
ಕೇವಲ ಸರ್ಕಾರ ಮಾತ್ರವಲ್ಲ. ಪಕ್ಷದ ನೇತೃತ್ವದ ಬಗ್ಗೆಯೂ ಚರ್ಚೆ ನಡೆದಿದೆ ಎನ್ನಲಾಗ್ತಿದೆ. ಬದಲಾವಣೆಗಳಾದ್ರೆ ಪಕ್ಷದಲ್ಲಿ ಮುಂದೆ ಆಗುವಂತಹ ಪರ, ವಿರೋಧ, ಸಾಧಕ, ಬಾಧಕಗಳ ಬಗ್ಗೆ ಚರ್ಚೆ ನಡೆದಿದೆ. ಇದೇ ವೇಳೆ ರಾಹುಲ್ ಗಾಂಧಿ ಕೆಲವೊಂದು ಪ್ರಶ್ನೆಗಳನ್ನು ಖರ್ಗೆ ಅವರ ಮುಂದಿಟ್ಟಿದ್ದಾರಂತೆ. ಸಂಪೂರ್ಣ ಮಾಹಿತಿ ಪಡೆದು ಅಲ್ಲಿಂದ ಹೊರಟಿದ್ದಾರೆ.
ಇನ್ನು, ಮೀಟಿಂಗ್ ಮುಗಿದ ಮೇಲೆ ಖರ್ಗೆ ಮನೆಯಿಂದ ರಾಹುಲ್ ಗಾಂಧಿ ತೆರಳಿದ್ದಾರೆ. ಬಳಿಕ ರಾಜ್ಯ ನಾಯಕರ ಜೊತೆ ಖರ್ಗೆ ಮತ್ತೊಮ್ಮೆ ಮಾತುಕತೆ ನಡೆಸಿದ್ದಾರೆ. ಪ್ರಿಯಾಂಕ್ ಖರ್ಗೆ, ಶರತ್ ಬಚ್ಚೇಗೌಡ ಜೊತೆ ಮಹತ್ವದ ಚರ್ಚೆ ನಡೆಸಿದ್ದಾರೆ.
ಇನ್ನೆರಡು ದಿನದಲ್ಲಿ ರಾಜ್ಯ ರಾಜಕೀಯದ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಸೋನಿಯಾ ಗಾಂಧಿ ಜೊತೆ ಮಾತುಕತೆ ಬಳಿಕ ಎಲ್ಲವೂ ಫೈನಲ್ ಆಗಲಿದೆ ಎನ್ನಲಾಗ್ತಿದೆ.
ವರದಿ: ರಂಜಿತ ರೇವಣ್ಣ ನಾಟನಹಳ್ಳಿ

