Wednesday, December 3, 2025

Latest Posts

ರಾಹುಲ್ ಗಾಂಧಿ – ಸೋನಿಯಾ ವಿರುದ್ಧ ಹೊಸ FIR

- Advertisement -

ಕಾಂಗ್ರೆಸ್ ನಲ್ಲಿ ಈಗ ಮತ್ತೊಂದು ಹೊಸ ವಿವಾದ ಭುಗಿಲೆದ್ದಿದೆ. ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕರಾದ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಸೇರಿದಂತೆ 5 ಜನರ ವಿರುದ್ಧ ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕ್ರಿಮಿನಲ್ ಪಿತೂರಿಯ ಆರೋಪದಡಿಯಲ್ಲಿ ದೆಹಲಿ ಪೊಲೀಸರ ಆರ್ಥಿಕ ಅಪರಾಧ ವಿಭಾಗವು ಹೊಸ FIR ದಾಖಲಿಸಿದೆ. ಜಾರಿ ನಿರ್ದೇಶನಾಲಯದ ದೂರಿನ ಆಧಾರದ ಮೇಲೆ ಅಕ್ಟೋಬರ್ 3 ರಂದು ಈ FIR ದಾಖಲಾಗಿದ್ದು, ನ್ಯಾಯಾಲಯದ ತೀರ್ಪು ಮುಂದೂಡಿಕೆಯಾದ ಒಂದು ದಿನದ ನಂತರ ಈ ವಿಷಯ ಬಹಿರಂಗವಾಗಿದೆ.

FIR ನಲ್ಲಿ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಜೊತೆಗೆ ಸ್ಯಾಮ್ ಪಿತ್ರೋಡಾ ಮತ್ತು ಇತರ ಮೂರು ವ್ಯಕ್ತಿಗಳ ಹೆಸರನ್ನು ಹಾಗೂ ಮೂರು ಕಂಪನಿಗಳ ಹೆಸರನ್ನು ಉಲ್ಲೇಖಿಸಲಾಗಿದೆ. ದುಸ್ಥಿತಿಯಲ್ಲಿದ್ದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಮೂಲ ಕಂಪನಿಯಾದ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ ಅನ್ನು ‘ವಂಚನೆಯ ಮೂಲಕ ಸ್ವಾಧೀನಪಡಿಸಿಕೊಳ್ಳಲು’ ಕ್ರಿಮಿನಲ್ ಪಿತೂರಿ ನಡೆಸಲಾಗಿದೆ ಎಂದು ಎಫ್‌ಐಆರ್ ಆರೋಪಿಸಿದೆ.

ಹಾಗಾದ್ರೆ ಏನಿದು ನ್ಯಾಷನಲ್ ಹೆರಾಲ್ಡ್ ಪ್ರಕರಣ? ಅನ್ನೋಅದನ್ನ್ ನೋಡೋದಾದ್ರೆ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ ಅನ್ನ ವಂಚನೆಯಿಂದ ಸ್ವಾಧೀನಪಡಿಸಿಕೊಂಡ ಆರೋಪದಲ್ಲಿ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಸೇರಿದಂತೆ ಒಟ್ಟು 5 ವ್ಯಕ್ತಿಗಳು ಮತ್ತು ಮೂರು ಕಂಪನಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಪ್ರಕರಣವು 2014 ರಲ್ಲಿ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು ನ್ಯಾಷನಲ್ ಹೆರಾಲ್ಡ್ ವ್ಯವಹಾರಗಳಲ್ಲಿ ಅಕ್ರಮ ನಡೆದಿದೆ ಎಂದು ಸಲ್ಲಿಸಿದ ದೂರನ್ನು ಆಧರಿಸಿದೆ.

ಸುಮಾರು ₹2,000 ಕೋಟಿ ಮೌಲ್ಯದ ಆಸ್ತಿ ಹೊಂದಿದ್ದ AJL ಕಂಪನಿಯ ನಿಯಂತ್ರಣವನ್ನು ರಾಜಕಾರಣಿಗಳು ‘ಯಂಗ್ ಇಂಡಿಯನ್’ ಮೂಲಕ ಅನುಚಿತವಾಗಿ ಸ್ವಾಧೀನಪಡಿಸಿಕೊಂಡಿದ್ದಾರೆ ಎಂಬುದು ಆರೋಪ. ಈ ‘ಯಂಗ್ ಇಂಡಿಯನ್’ ಕಂಪನಿಯಲ್ಲಿ ರಾಹುಲ್ ಮತ್ತು ಸೋನಿಯಾ ಗಾಂಧಿ ಶೇಕಡಾ 76 ರಷ್ಟು ಪಾಲನ್ನು ಹೊಂದಿದ್ದಾರೆ. ಪ್ರಸ್ತುತ ED ಹಣ ವರ್ಗಾವಣೆ ತಡೆ ಕಾಯ್ದೆಯ ಅಡಿಯಲ್ಲಿ ತನಿಖೆ ಮುಂದುವರಿಸಲು ಈ ಹೊಸ EOW FIR ದಾಖಲಾಗಿದೆ.

ವರದಿ : ಲಾವಣ್ಯ ಅನಿಗೋಳ

- Advertisement -

Latest Posts

Don't Miss