Mandya News: ಮಂಡ್ಯ: ಮಂಡ್ಯದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಿತು. ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ,ಬಿಜೆಪಿ ರೈತ ಮೋರ್ಚದಿಂದ ಈ ಹೋರಾಟ ನಡೆದಿದೆ.
ಮಂಡ್ಯದ ಸಂಜಯ್ ವೃತ್ತದಲ್ಲಿ ಈ ಪ್ರತಿಭಟನೆ ನಡೆದಿದ್ದು, ಎತ್ತಿನ ಗಾಡಿಯಲ್ಲಿ ಹತ್ತಿ, ರಾಜ್ಯ ಸರ್ಕಾರ ಮತ್ತು ಕೃಷಿ ಸಚಿವ ಚೆಲುವರಾಯಸ್ವಾಮಿ ವಿರುದ್ಧ ಘೋಷಣೆ ಕೂಗಿದರು. ಖರೀದಿ ಕೇಂದ್ರ ತೆರೆಯುವಲ್ಲಿ ವಿಫಲ, ರೈತರ ಬೇಡಿಕೆ ಈಡೇರಿಸುವಲ್ಲಿ ವಿಫಲವಾಗಿದೆ. ಆದರೆ ನಾಟಿ ಕೋಳಿ ತಿಂದು ಎಂಜಾಯ್ ಮಾಡ್ತಿರೋ ಸಿದ್ದರಾಮಯ್ಯ ಎಂದು ಪ್ರತಿಭಟನಾಕಾರರು ವ್ಯಂಗ್ಯವಾಡಿದ್ದಾರೆ.
ಪ್ರತಿಭಟನೆಯಲ್ಲಿ ಬಿಜೆಪಿ ರೈತ ಮೋರ್ಚ ಜಿಲ್ಲಾಧ್ಯಕ್ಚ ಅಶೋಕ್ ಜಯರಾಮ್, ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್, ಎಸ್ಪಿ ಸ್ವಾಮಿ, ಇಂಡವಾಳು ಸಚ್ಚಿದಾನಂದ, ಅಶೋಕ್, ರಘು, ಮಂಜುನಾಥ್ ಸೇರಿ ಹಲವರು ಭಾಗಿಯಾಗಿದ್ದು, ತಕ್ಷಣವೇ ಖರೀದಿ ಕೇಂದ್ರ ತೆರೆದು ಬೆಳೆದ ಬೆಳೆಗೆ ಬೆಂಬಲ ನೀಡಿ ರೈತರಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿದ್ದಾರೆ.

