Tumakuru News: ತುಮಕೂರು: ತುಮಕೂರಿನಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗೊನೆ ಸಹಿತ ನುಸಿ ಪೀಡಿತ ತೆಂಗಿನ ಬೆಳೆ ಹಿಡಿದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಶಾಸಕ ಜ್ಯೋತಿಗಣೇಶ್ ಸೇರಿದಂತೆ ಹಲವು ಮುಖಂಡರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ನಗರದ ಚರ್ಚ್ ಸರ್ಕಲ್ ನಿಂದ ಜಂಟಿ ಕೃಷಿ ನಿರ್ದೇಶಕರ ಕಚೇರಿ ಎದುರು ಈ ಪ್ರತಿಭಟನೆ ನಡೆದಿದ್ದು, ರೈತರ ನೇತೃತ್ವದಲ್ಲಿ ಕೃಷಿ ನಿರ್ದೇಶಕರ ಕಚೇರಿಗೆ ಮುತ್ತಿಗೆ ಹಾಕಲಾಗಿದೆ. ಜಿಲ್ಲೆಯಲ್ಲಿ ತೆಂಗಿನ ಬೆಳಗೆ ನುಸಿ ರೋಗ ವ್ಯಾಪಕವಾಗಿ ಹರಡಿದೆ. ಆದರೆ ಸೂಕ್ತ ಪರಿಹಾರ ರೂಪದಲ್ಲಿ ಔಷಧಿಗಳನ್ನು ರೈತರಿಗೆ ನೀಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಟೀಕೆ ಮಾಡಿದ್ದಾರೆ.
ಇನ್ನು ಕೃಷಿ ಇಲಾಖೆಯ ಮುಂಭಾಗದ ಗೇಟ್ ನಲ್ಲಿ ಪೊಲೀಸರು ಈ ಪ್ರತಿಭಟನಾ ಮೆರವಣಿಗೆ ತಡೆದಿದ್ದು, ಈ ಕಾರಣಕ್ಕಾಗಿ ಪೋಲೀಸರ ವಿರುದ್ಧವೂ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

