‘ರಾಯಣ್ಣನ ಪ್ರತಿಮೆಗಾಗಿ ಕನ್ನಡಿಗರು ಇಷ್ಟು ಹರಸಾಹಸ ಪಡಬೇಕೇ..?’

ಜಿಎಸ್‌ಟಿ ಪರಿಹಾರ ನೀಡದ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಮುಖ್ಯಂತ್ರಿಗಳಾದ ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಆದ್ರೆ ಇಲ್ಲಿ ಸಿದ್ದರಾಮಯ್ಯ ರಾಜ್ಯಸರ್ಕಾರದ ವಿರುದ್ಧ ಹರಿಹಾಯ್ದರೆ, ಕುಮಾರಸ್ವಾಮಿ ಯಡಿಯೂರಪ್ಪ ಸರ್ಕಾರದ ಪರ ಬ್ಯಾಟ್ ಬೀಸಿದ್ದಾರೆ.

Karnataka TV Contact

ಸರಕು ಮತ್ತು ಸೇವಾ ತೆರಿಗೆ (ಜಿ ಎಸ್ ಟಿ) ನಷ್ಟ ತುಂಬಿಕೊಡುವ ಬದ್ಧತೆಯಿಂದ ಹಿಂದೆ ಸರಿದಿರುವ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರಗಳ ಮೇಲೆ ಗದಾಪ್ರಹಾರ ಮಾಡುವ ಮೂಲಕ ಹೊಣೆಗೇಡಿತನ ಪ್ರದರ್ಶಿಸಿರುವುದು ತೀವ್ರ ಖಂಡನೀಯ. ಕೊಟ್ಟವ ಕೋಡಂಗಿ; ಇಸ್ಕೊಂಡವ ಈರಭದ್ರ ಎಂಬಂತೆ ರಾಜ್ಯ ಸರ್ಕಾರಗಳು ಕಣ್ಣುಬಾಯಿ ಬಿಡುತ್ತಿವೆ. ಈಗ ಕೊರೊನಾ ನೆಪ ಮುಂದಿಟ್ಟು ಅನ್ಯಾಯ ಮಾಡಿಬಿಟ್ಟರೆ ರಾಜ್ಯಸರ್ಕಾರಗಳು ಏನು ಮಾಡಬೇಕು? ಕೋವಿಡ್ 19 ಮತ್ತು ನೆರೆಯಿಂದ ಬಳಲಿರುವ ರಾಜ್ಯ ಸರ್ಕಾರಗಳು ಕೇಂದ್ರ ಸರ್ಕಾರಕ್ಕೆ ಹಿಡಿಶಾಪ ಹಾಕುತ್ತಿವೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಇನ್ನು ಇದೇ ವಿಷಯದ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ರಾಜ್ಯಗಳ ಬಗ್ಗೆ ಕಾಳಜಿಯೇ ಇಲ್ಲದಿರುವ ಅತ್ಯಂತ ಕೆಟ್ಟ ಸರ್ಕಾರ ಕೇಂದ್ರದಲ್ಲಿದ್ದರೆ, ಅದನ್ನು ಪ್ರಶ್ನಿಸುವ ಧೈರ್ಯವಿಲ್ಲದ ಕರ್ನಾಟಕದ ಬಿಜೆಪಿ ಹೇಡಿ ಸರ್ಕಾರ ನಮ್ಮ ರಾಜ್ಯದಲ್ಲಿದೆ. ಬಿಜೆಪಿಯೇತರ ರಾಜ್ಯ ಸರ್ಕಾರಗಳು ಕೇಂದ್ರವು ಜಿಎಸ್‌ಟಿ ಪರಿಹಾರ ನೀಡದಿರುವ ನಿರ್ಧಾರವನ್ನು ವಿರೋಧ ಮಾಡಿವೆ. ರಾಜ್ಯ ಸರ್ಕಾರಕ್ಕೆ ಧೈರ್ಯವಿದ್ದರೆ ನೀವೇ ಸಾಲ ತೆಗೆದುಕೊಂಡು ನಮಗೆ ಜಿ.ಎಸ್.ಟಿ ಪರಿಹಾರ ಕೊಡಿ ಎಂದು ಕೇಂದ್ರ ಸರ್ಕಾರವನ್ನು ಕೇಳಲಿ ಮತ್ತು ಸರ್ವ ಪಕ್ಷ ನಿಯೋಗ ಕೊಂಡೊಯ್ದು ಕೇಂದ್ರದ ಮೇಲೆ ಒತ್ತಡ ಹೇರಲಿ. ರಾಜ್ಯದ ಹಿತದೃಷ್ಟಿಯಿಂದ ಕೇಂದ್ರದ ಮೇಲೆ ಒತ್ತಡ ಹೇರುವ ಕೆಲಸವನ್ನು ರಾಜ್ಯ ಸರ್ಕಾರ ಈಗ ಮಾಡಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಸ್ಯಾಂಡಲ್‌ವುಡ್ ಯುವರಾಜ ನಿಖಿಲ್ ಕುಮಾರಸ್ವಾಮಿ,ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆ ಬಗ್ಗೆ ಧ್ವನಿ ಎತ್ತಿದ್ದಾರೆ. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕರ್ನಾಟಕದ ಅಸ್ಮಿತೆ. ಅಂತಹವರ ಪ್ರತಿಮೆ ಸ್ಥಾಪನೆಗೆ ವಿರೋಧಿಸುವುದು ನಾಡದ್ರೋಹದ ಕೆಲಸ. ನಮ್ಮದೇ ನೆಲದಲ್ಲಿ ರಾಯಣ್ಣನ ಪ್ರತಿಮೆ ಸ್ಥಾಪನೆ ಮಾಡಲು ಕನ್ನಡಿಗರು ಇಷ್ಟು ಹರಸಾಹಸ ಪಡಬೇಕೇ? ಬೆಳಗಾವಿ ಜಿಲ್ಲೆ ಪೀರನವಾಡಿಯಲ್ಲಿ ನಮ್ಮ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರ ಪ್ರತಿಮೆ ಪ್ರತಿಷ್ಠಾಪನೆ ವಿರೋಧಿಸಿ ಪುಂಡಾಟಿಕೆ ಮಾಡುತ್ತಿರುವ ಕೆಲವು ಸಂಘಟನೆಗಳನ್ನು ಸರ್ಕಾರ ಕೂಡಲೇ ಮಟ್ಟ ಹಾಕಬೇಕು. ನಮ್ಮದೇ ನಾಡಿನಲ್ಲಿ ನಮ್ಮ ನೆಲದ ಕ್ರಾಂತಿವೀರರ ಪ್ರತಿಮೆ ಸ್ಥಾಪನೆಗೆ ವಿರೋಧ ಮಾಡುವುದು ಕನ್ನಡಿಗರ ಸ್ವಾಭಿಮಾನ ಹಾಗೂ ಸಹನೆಯನ್ನು ಕೆಣಕಿದಂತೆಯೇ. ಮಾನ್ಯ ಮುಖ್ಯಮಂತ್ರಿಗಳು ಈ ಬಗ್ಗೆ ವಿಶೇಷ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸುತ್ತೇನೆ ಎಂದಿದ್ದಾರೆ.

ಸ್ಯಾಂಡ್‌ವುಡ್‌ನಲ್ಲಿ ಡ್ರಗ್ಸ್ ಧಂದೆ ಭಾರೀ ಜೋರಾಗಿ ನಡೆಯುತ್ತಿದೆ ಎಂಬ ಸುದ್ದಿ ಕೇಳಿಬಂದಿದ್ದು, ಈ ಬಗ್ಗೆ ನಟ ಜಗ್ಗೇಶ್ ಸಾಲು ಸಾಲು ಟ್ವೀಟ್ ಮಾಡಿದ್ದಾರೆ. ಶ್ರೇಷ್ಠ ಮನುಜನ್ಮ!ಅದುನಶ್ವರ ಸತ್ಯ!ಆದರು ಆ ನಶ್ವರದೇಹ ನಶಿಸುವಮುನ್ನ ಸಾರ್ಥಕಪಡಿಸಿ ಬದುಕಬೇಕು!ನಶೆ ಹಾದರದ ಹಿಂದೆ ಬರಿ ಸಿನಿಮ ಅಲ್ಲಾ ಸಮಾಜವೆ ಆಕರ್ಷಶಿತ ಆಗುತ್ತಿದೆ! ಯಾರು ಶ್ರಮಪಟ್ಟು ಜೀವನ ಗೆದ್ದಿರುತ್ತಾರೆ ಅವರ ಹೆಜ್ಜೆ ತಪ್ಪುದಾರಿ ತುಳಿಯದು!ಯಾರು ವಾಮಮಾರ್ಗದಲ್ಲಿ ಗೆದ್ದಿರುತ್ತಾರೆ ಅವರೆ ನಶೆಹಾದರದ ದಾಸರು!ಉಪ್ಪುತಿಂದವ ನೀರುಕುಡಿಯುವ! ಎಂದು ಹೇಳಿದ್ದಾರೆ.

ಯಲಹಂಕದಲ್ಲಿ ಬೃಹತ್ ಕೆಂಪೇಗೌಡ ಮೂರ್ತಿ, ಅಂಬೇಡ್ಕರ್ ಮತ್ತು ಬಸವಣ್ಣನವರ ಪ್ರತಿಮೆ ನಿರ್ಮಾಣವಾಗಲಿದ್ದು, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಮತ್ತು ಯಲಹಂಕ ತಹಶೀಲ್ದಾರ್ ರಘುಮೂರ್ತಿ ಅವರು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಯಲಹಂಕದ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಪ್ರತಿಮೆ ನಿರ್ಮಿಸಲು ಯೋಜನೆ ಹಾಕಿದ್ದು, ಸುಮಾರು ಎರಡು ಕೋಟಿ ವೆಚ್ಚದಲ್ಲಿ ನಿರ್ಮಾಣಕ್ಕೆ ಸಿದ್ಧತೆ ನಡೆಸಲಾಗಿದೆ. ಇನ್ನು ಒಂದುವರೆ ಎಕರೆ ಜಾಗದಲ್ಲಿ ಪ್ರತಿಮೆ ನಿರ್ಮಾಣವಾಗಲಿದೆ.

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.

About The Author