ಸ್ಯಾಂಡಲ್ವುಡ್ನಲ್ಲಿ ಡ್ರಗ್ಸ್ ದಂಧೆ ಜೋರಾಗಿ ನಡೆಯುತ್ತಿರುವ ಬಗ್ಗೆ ನಟ ಜಗ್ಗೇಶ್ ಟ್ವೀಟ್ ಮೂಲಕ ಅಭಿಪ್ರಾಯ ಮತ್ತು ಅನುಭವ ಹಂಚಿಕೊಂಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಜಗ್ಗೇಶ್, ಶ್ರೇಷ್ಠ ಮನುಜನ್ಮ, ಅದುನಶ್ವರ ಸತ್ಯ, ಆದರು ಆ ನಶ್ವರದೇಹ ನಶಿಸುವಮುನ್ನ ಸಾರ್ಥಕಪಡಿಸಿ ಬದುಕಬೇಕು. ನಶೆ ಹಾದರದ ಹಿಂದೆ ಬರಿ ಸಿನಿಮ ಅಲ್ಲಾ ಸಮಾಜವೆ ಆಕರ್ಷಶಿತ ಆಗುತ್ತಿದೆ. ಯಾರು ಶ್ರಮಪಟ್ಟು ಜೀವನ ಗೆದ್ದಿರುತ್ತಾರೆ ಅವರ ಹೆಜ್ಜೆ ತಪ್ಪುದಾರಿ ತುಳಿಯದು. ಯಾರು ವಾಮಮಾರ್ಗದಲ್ಲಿ ಗೆದ್ದಿರುತ್ತಾರೆ ಅವರೆ ನಶೆಹಾದರದ ದಾಸರು. ಉಪ್ಪುತಿಂದವ ನೀರುಕುಡಿಯುವ ಎಂದಿದ್ದಾರೆ.

ಸರಿಯಾಗಿ ಬಾಳಿಬದುಕುವ ನಿರ್ಧಾರ ಮಾಡಿ ಶ್ರಮಿಸುವರು ಎಲ್ಲೆ ಇದ್ದರು ಶ್ರೇಷ್ಠವಾಗಿ ಉಳಿಯುತ್ತಾರೆ. ನಾನು ನನ್ನಿಷ್ಟ! ನನ್ನ ಬದುಕು ಎನ್ನುವರ ಮಠಕ್ಕೆ ಸೇರಿಸಿದರು. ನಶೆ ಹಾದರದ ಬಿಸಿ ಹೆಂಚಿನಮೇಲೆ ಸ್ವಲ್ಪ ಕಾಲ ಬದುಕಿ. ವಿಕೃತ ಆನಂದ ಅನುಭವಿಸಿ ಸೀದುಹೋಗುತ್ತಾರೆ. ಏಕ್ ಮಾರ್ ದೋ ತುಕಡ. ತಪ್ಪು ಮಾಡಿದವರ ಬೆತ್ತಲೆ ಮಾಡಿ. ಆಗಲಾದರು ಜನಕ್ಕೆ ಅರಿವಾಗಲಿ ಎಂದು ಹೇಳಿದ್ದಾರೆ.
ಇನ್ನು ಈ ಬಗ್ಗೆ ಅನುಭವ ಹಂಚಿಕೊಂಡಿರುವ ಜಗ್ಗೇಶ್, ಬಲವಂತಕ್ಕೆ 2017 ಒಬ್ಬ ರಾಜಕಾರಣಿ ಪಾರ್ಟಿಗೆ ಹೋಗಿದ್ದೆ. ಅರ್ಧಘಂಟೆಗೆ ಆ ಜಾಗ ಅಲ್ಲಿದ್ದವರ ಆರ್ಭಟ. ಬಂದು ಸೇರಿದ ಅರ್ಧಉಡುಗೆ ಸುಂದರಿಯರು. ಅದಕಂಡು ನಾನು ನನ್ನ ಆತ್ಮೀಯ ಯುವನಟ ಹೇಳದೆಕೇಳದೆ ಲಿಫ್ಟು ಬಳಸದೆ 12ಮಹಡಿ ಇಳಿದು ಓಡಿದೆವು. ಅದೆಕಡೆ ಇಂದಿಗು ನನಗೆ ಯಾರು ಕರೆಮಾಡದಂತೆ ಮೊಬೈಲ್ ವರ್ಜಿಸಿದೆ. ಅಲ್ಲಿದ್ದವರು ಸಮಾಜದ ಎಲ್ಲ ಮುಖಗಳು ಎಂದಿದ್ದಾರೆ.

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.




