RCB ಫ್ಯಾನ್ಸ್ ಗೆ ಬಿಗ್ ‘ಗುಡ್​​ ನ್ಯೂಸ್’

19ನೇ ಆವೃತ್ತಿಯ ಐಪಿಎಲ್‌ನಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡದ ಎಲ್ಲಾ ಪಂದ್ಯಗಳು ಬೆಂಗಳೂರಿನಿಂದಲೇ ಎತ್ತಂಗಡಿ ಆಗುವ ಆತಂಕದಲ್ಲಿದ್ದ ಅಭಿಮಾನಿಗಳಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಜೂನ್ 4 ರಂದು ಐಪಿಎಲ್ 2025 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಗೆಲುವನ್ನು ಆಚರಿಸಲು ದೊಡ್ಡ ಜನಸಮೂಹ ಜಮಾಯಿಸಿದಾಗ ಕ್ರೀಡಾಂಗಣದಲ್ಲಿ ಕಾಲ್ತುಳಿತ ಸಂಭವಿಸಿದ ನಂತರ ಕರ್ನಾಟಕದಲ್ಲಿ ಕಾರ್ಯಕ್ರಮವನ್ನು ಆಯೋಜಿಸುವ ಬಗ್ಗೆ ಅನುಮಾನಗಳ ನಡುವೆ ಈ ಪ್ರಕಟಣೆ ಬಂದಿದೆ. ಈ ಬಗ್ಗೆ ಡಿಕೆಶಿವಕುಮಾರ್ ಮಾತನಾಡಿದ್ದಾರೆ. ನಾವು IPL ಅನ್ನು ಬೇರೆಡೆಗೆ ಸ್ಥಳಾಂತರಿಸುವುದಿಲ್ಲ ಮತ್ತು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅದನ್ನು ಮುಂದುವರಿಸುತ್ತೇವೆ.

ಇದು ಬೆಂಗಳೂರು ಮತ್ತು ಕರ್ನಾಟಕದ ಹೆಮ್ಮೆ, ಇದನ್ನು ನಾವು ಉಳಿಸಿಕೊಳ್ಳುತ್ತೇವೆ. ಭವಿಷ್ಯದಲ್ಲಿ ದೊಡ್ಡ ಹೊಸ ಕ್ರೀಡಾಂಗಣವನ್ನು ನಿರ್ಮಿಸಲಾಗುವುದು ಎಂದು ಹೇಳಿದರು. ನಾನು ಕ್ರಿಕೆಟ್ ಪ್ರೇಮಿ. ಕರ್ನಾಟಕದಲ್ಲಿ ಇಂತಹ ಅಪಘಾತ ಮತ್ತೆ ಸಂಭವಿಸದಂತೆ ನೋಡಿಕೊಳ್ಳುತ್ತೇವೆ ಮತ್ತು ಬೆಂಗಳೂರಿನ ಗೌರವವನ್ನು ಎತ್ತಿಹಿಡಿಯುವ ರೀತಿಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗಳನ್ನು ನಡೆಸುತ್ತೇವೆ. ಎಂದು ಉಪಮುಖ್ಯಮಂತ್ರಿ ಡಿಕೆಶಿ ಹೇಳಿದರು.

ಇತ್ತೀಚೆಗೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಸಂಭವಿಸಿ 11 ಜನರು ದಾರುಣವಾಗಿ ಸಾವನ್ನಪ್ಪಿದ್ದರು. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಪಂದ್ಯಗಳನ್ನು ಬೇರೆ ಮೈದಾನಗಳಿಗೆ ಸ್ಥಳಾಂತರ ಮಾಡಲಾಗಿತ್ತು. ಹೀಗಾಗಿ ಸಹಜವಾಗಿಯೇ ಆರ್​​ಸಿಬಿ ಅಭಿಮಾನಿಗಳಿಗೆ ನಿರಾಸೆಯಾಗಿತ್ತು.

ಈ ಬಗ್ಗೆ ಡಿಕೆಶಿ ಮಾತನಾಡಿ, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಳೆದು ಹೋಗುತ್ತಿರುವ ಅಂತರಾಷ್ಟ್ರೀಯ ಪಂದ್ಯಗಳನ್ನು ನಾವು ವಾಪಸ್ ತರುತ್ತೇವೆ. ಬೆಂಗಳೂರು ಯಾವಾಗಲೂ ಪ್ರಮುಖ ಕ್ರಿಕೆಟ್ ಹಬ್ ಆಗಿ ಉಳಿಯಬೇಕು. 2026ರ ಐಪಿಎಲ್ ಪಂದ್ಯಗಳು ಸಹ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿಯೇ ನಡೆಯುತ್ತವೆ. ಐಪಿಎಲ್‌ನಂತಹ ಬೃಹತ್ ಟೂರ್ನಿಗಳನ್ನು ಬೆಂಗಳೂರು ಕಳೆದುಕೊಳ್ಳದಂತೆ ನೋಡಿಕೊಳ್ಳುತ್ತೇವೆ. ನಾನು ಕ್ರಿಕೆಟ್‌ ಲವರ್‌. RCB ನಮ್ಮ ಹೆಮ್ಮೆ. ನಾನು ಎಲ್ಲಾ ಸರಿ ಮಾಡುತ್ತೇನೆ ಎಂದು ಭರವಸೆ ನೀಡಿದರು.

About The Author