ಏನು ಗೊತ್ತಿಲ್ಲದ ಮಂತ್ರಿಗಳು ಇಷ್ಟೊಂದು ಕಟುವಾದ ವಿಧೇಯಕ ಮಂಡಿಸಲು ಸಾಧ್ಯವಿಲ್ಲ: ನಿಖಿಲ್ ಕುಮಾರ್

Bengaluru: ಬೆಂಗಳೂರಿನ ಪಕ್ಷದ ರಾಜ್ಯ ಕಛೇರಿ ಜೆ.ಪಿ ಭವನದಲ್ಲಿ ಇಂದು ಕರ್ನಾಟಕ ದ್ವೇಷ ಭಾಷಣ ಮತ್ತು‌ ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕವನ್ನು ಮಾನ್ಯ ಗೃಹ ಸಚಿವರಾದ ಶ್ರೀ ಜಿ.ಪರಮೇಶ್ವರ್ ಅವರ ಮಂಡಿಸಿದ ಹಿನ್ನೆಲೆಯಲ್ಲಿ ಈ ವಿಧೇಯಕವನ್ನು ವಿರೋಧಿಸಿ, ಜೆಡಿಎಸ್ ಯುವನಾಯಕ ನಿಖಿಲ್ ಕುಮಾರ್ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದರು.

ಕರ್ನಾಟಕ ದ್ವೇಷ ಭಾಷಣ ಮತ್ತು‌ ದ್ವೇಷ ಅಪರಾಧಗಳ(ಪ್ರತಿಬಂಧಕ) ವಿಧೇಯಕವು ಸಂವಿಧಾನ ನಮಗೆ ನೀಡಿರುವ ವಾಕ್ ಸ್ವಾತಂತ್ರ್ಯವನ್ನು ಕಿತ್ತುಕೊಳ್ಳುತ್ತದೆ. ಈ ವಿಧೇಯಕದ ಮೂಲಕ ಕಾಂಗ್ರೆಸ್ ಸರ್ಕಾರವು 1975 ರ ತುರ್ತು ಪರಿಸ್ಥಿತಿಯನ್ನು ಮರುಕಳಿಸುವ ಕುತಂತ್ರ ಮಾಡುತ್ತಿದ್ದು, ಇದರ ಮೂಲಕ ಪ್ರತಿಪಕ್ಷಗಳು, ಮಾಧ್ಯಮದವರ ಮೇಲೆ ನಿಯಂತ್ರಣ ಮತ್ತು ಹೆದರಿಸುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ ಎಂದು ನಿಖಿಲ್ ಕುಮಾರ್ ಆರೋಪಿಸಿದ್ದಾರೆ.

ಈ ವಿಧೇಯಕದ ಮೂಲಕ ಪ್ರಜಾಪ್ರಭುತ್ವದ ಮೇಲೆ ಕಾಂಗ್ರೆಸ್ ದಾಳಿ ಮಾಡುತ್ತಿದೆ. ಈ ಬಿಲ್ ನನ್ನು ಬೇರೆ ಯಾರೋ ತಯಾರಿಸಿ, ಗೃಹ ಸಚಿವರಾದ ಶ್ರೀ ಜಿ.ಪರಮೇಶ್ವರ್ ಅವರ ಮೂಲಕ ಜಾರಿಗೆ ತರಲು ಯತ್ನಿಸುತ್ತಿದ್ದಾರೆ. ಏನು ಗೊತ್ತಿಲ್ಲದ ಮಂತ್ರಿಗಳು ಇಷ್ಟೊಂದು ಕಟುವಾದ ವಿಧೇಯಕ ಮಂಡಿಸಲು ಸಾಧ್ಯವಿಲ್ಲ ಎಂದು ನಿಖಿಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕಾನೂನಿನ ಮೂಲಕ ಮಾಧ್ಯಮಗಳನ್ನು, ರಾಜಕೀಯ ಪಕ್ಷದ ಕಾರ್ಯಕರ್ತರನ್ನು ಹಾಗೂ ವಿರೋಧ ಪಕ್ಷದ ಕಾರ್ಯಕರ್ತರನ್ನು ಹೆದರಿಸುವ ಕೆಲಸಕ್ಕೆ ಕೈ ಹಾಕಿದ್ದಾರೆ. ಅದು ಈ ಸರ್ಕಾರದಿಂದ ಸಾಧ್ಯವಿಲ್ಲ. ಈ ವಿಧೇಯಕದ ವಿರುದ್ಧ ಸದನದ ಒಳಗೆ ಮತ್ತು ಹೊರಗೆ ನಮ್ಮ ಪಕ್ಷ ಹೋರಾಟ ಮಾಡಲಿದೆ ಎಂದು ಸರ್ಕಾರಕ್ಕೆ ನಿಖಿಲ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಕೋರ್ ಕಮಿಟಿ ಅಧ್ಯಕ್ಷರಾದ ಜೆ.ಕೆ. ಕೃಷ್ಣಾರೆಡ್ಡಿ ಅವರು, ಮಾಜಿ ವಿಧಾನಪರಿಷತ್ ಅಧ್ಯಕ್ಷರಾದ ತಿಪ್ಪೇಸ್ವಾಮಿ ಅವರು, ವಕ್ತಾರರಾದ ಶ್ರೀ ಗಂಗಾಧರ್ ಮೂರ್ತಿಅವರು, ಶ್ರೀ ಪ್ರದೀಪ್ ಕುಮಾರ್ a ಅವರು ನಿಖಿಲ್ ಅವರಿಗೆ ಸಾಥ್ ನೀಡಿದರು.

About The Author