Political News: ರಾಜ್ಯದಲ್ಲಿ ದ್ವೇಷ ಭಾಷಣ ಮಾಡಿದರೆ 10 ವರ್ಷಗಳ ಕಾಲ ಅಂಥವರಿಗೆ ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂದು ಗೃಹಸಚಿವ ಜಿ.ಪರಮೇಶ್ವರ್ ಅವರು ಹೇಳಿಕೆ ನೀಡಿದ್ದು, ಈ ಹೇಳಿಕೆಗೆ ವಿರೋಧ ಪಕ್ಷದ ನಾಯಕರು ಸೇರಿ ಹಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಆಕ್ಷೇಪ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, “ದ್ವೇಷ ಭಾಷಣ”ಕ್ಕೆ 10 ವರ್ಷಗಳ ಜೈಲು ಶಿಕ್ಷೆ?- ಇದು ಕರ್ನಾಟಕದ ಕಾಂಗ್ರೆಸ್ ಸರ್ಕಾರ ಸಾರ್ವಜನಿಕ ಅಭಿಪ್ರಾಯಗಳಿಗೆ ಕಡಿವಾಣ ಹಾಕಲು “ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ” ಶಾಸನ ರಚನೆ ಮಾಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇದು ದ್ವೇಷ ಭಾಷಣವನ್ನು ನಿಯಂತ್ರಿಸುವ ಉದ್ದೇಶವೋ ಅಥವಾ ವಾಕ್ ಸ್ವಾತಂತ್ರ್ಯವನ್ನೇ ಕಿತ್ತುಕೊಳ್ಳುವುದಕ್ಕೋ? ಸಮಾಜದಲ್ಲಿ ಸಾಮರಸ್ಯವನ್ನು ಕಾಪಾಡಿಕೊಳ್ಳುವುದಕ್ಕೋ ಅಥವಾ ಸರ್ಕಾರದ ದುರಾಡಳಿತವನ್ನು ಪ್ರಶ್ನಿಸುವ ಧನಿಯನ್ನು ನಿಯಂತ್ರಿಸುವ ಉದ್ದೇಶಕ್ಕೋ? ಎಂದು ಜೋಶಿ ಪ್ರಶ್ನಿಸಿದ್ದಾರೆ.
ಈ ವಿಧೇಯಕ ವಿಮರ್ಶಕರನ್ನು ವಿಮರ್ಶಿಸುವುದರಿಂದ ದೂರ ಉಳಿಯುವಂತೆ ಹಾಗೂ ಸರ್ಕಾರದ ದುರಾಡಳಿತ ಹೊರಬಾರದಂತೆ ಮತ್ತು ಸಾರ್ವಜನಿಕರಲ್ಲಿ ಭಯದ ವಾತಾವರಣ ಸೃಷ್ಟಿಸುವ ಮೂಲಕ ರಾಜಕೀಯ ನಿಯಂತ್ರಣಕ್ಕಾಗಿ ಜಾರಿಗೆ ತಂದಿರುವುದು ಸ್ಪಷ್ಟವಾಗಿದೆ. ಇದು ವಾಕ್ ಸ್ವತಂತ್ರ ಕಿತ್ತುಕೊಳ್ಳುವ ಕಾಂಗ್ರೆಸ್ ಪಕ್ಷದ ಕ್ರೂರ ಸಂಪ್ರದಾಯದ ಪ್ರದರ್ಶನ ಎಂದು ಜೋಶಿ ಕಾಂಗ್ರೆಸ್ ಸರ್ಕಾರದ ಕ್ರಮದ ವಿರುದ್ಧ ಕಿಡಿಕಾರಿದ್ದಾರೆ.
Karnataka’s Congress regime is misusing legislation to control public opinion. A 10-year jail term for “hate speech”?
Is this to curb hate speech or to curb freedom of speech itself?
Is this for maintaining harmony, or for silencing every voice that questions their failures?…— Pralhad Joshi (@JoshiPralhad) December 12, 2025




