ದಲಿತರ ಮತ್ತು ಬುಡಕಟ್ಟು ಸಮುದಾಯಗಳ ಅಭಿವೃದ್ಧಿಗೆ ಮೀಸಲಿಟ್ಟಿದ್ದ SCSP–TSP ನಿಧಿಯನ್ನು ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡಿರುವುದು ಸಭೆಯಲ್ಲಿ ಬೆಳಕಿಗೆ ಬಂದಿದೆ. ದಲಿತರ ಅಭಿವೃದ್ಧಿಗೆ ಮೀಸಲಿಟ್ಟಿದ್ದ SCSP-TSP ಹಣವನ್ನ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡಿದೆ. ವಿಧಾನ ಪರಿಷತ್‌ನಲ್ಲಿ ಈ ಬಗ್ಗೆ ಸಮಾಜ ಕಲ್ಯಾಣ ಇಲಾಖೆ ಸಚಿವ ಮಹದೇವಪ್ಪ ಅವರು ಮಾಹಿತಿ ನೀಡಿದ್ದಾರೆ.
2.5 ವರ್ಷಗಳಲ್ಲಿ SCSP ಯೋಜನೆಯ ಹಣದಲ್ಲಿ 25,909 ಕೋಟಿ ರೂ. ಹಾಗೂ TSP ಅನುದಾನದಲ್ಲಿ 11,273 ಕೋಟಿ ರೂ. ಖರ್ಚು ಮಾಡಲಾಗಿದೆ ಅಂತ ಬಿಜೆಪಿ ಸದಸ್ಯೆ ಹೇಮಲತಾ ನಾಯಕ್ ಪ್ರಶ್ನೆಗೆ ಸಚಿವರು ಉತ್ತರ ನೀಡಿದ್ದಾರೆ. ಬಿಜೆಪಿಯ ಹೇಮಲತಾ ನಾಯಕ್ ಅವರು ‘ಸಮಾಜ ಕಲ್ಯಾಣ ಇಲಾಖೆಯಡಿ ಬರುವ ಡಾ. ಬಾಬು ಜಗಜೀವನ ರಾಮ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮಕ್ಕೆ 2023-24ನೇ ಸಾಲಿನಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ ಹಣ ಬಿಡುಗಡೆ ಮಾಡಿಲ್ಲ.
ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ ಭೂ ಒಡೆತನ ಅಡಿ ಕೇವಲ 3 ಸಾಧನೆ ಮಾಡಿದೆ. ಮೈಕ್ರೊ ಕ್ರೆಡಿಟ್ ವಿಷಯದಲ್ಲಿ ಬಹುತೇಕ ನಿಗಮಗಳು ಸಾಧನೆ ಸರಿಯಾಗಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.ಇದಕ್ಕೆ ಉತ್ತರಿಸಿರುವ ಅವರು, ‘2025-26ನೇ ಸಾಲಿನಲ್ಲಿ 23,35,197 ಪರಿಶಿಷ್ಟ ಜಾತಿ, 9,14,025 ಪ.ಪಂಗಡದವರು ಗೃಹ ಲಕ್ಷ್ಮೀ ಫಲಾನುಭವಿಗಳಾಗಿದ್ದಾರೆ.
ಗೃಹಲಕ್ಷ್ಮಿ, ಅನ್ನಭಾಗ್ಯ, ಯುವನಿಧಿ, ಗೃಹಜ್ಯೋತಿ, ಶಕ್ತಿ ಯೋಜನೆ, ಯೋಜನೆಗಳಿಗೆ SCSP–TSP ಅಡಿ ಒಟ್ಟು ₹25,909 ಕೋಟಿ ಮತ್ತು ₹11,273 ಕೋಟಿ ಹಣವನ್ನು ಬಿಡುಗಡೆ ಮಾಡಲಾಗಿದೆ. ಈ ನಿರ್ಧಾರವು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದ್ದು, ದಲಿತರ ಅಭಿವೃದ್ಧಿಗೆ ಮೀಸಲಿಟ್ಟಿದ್ದ ನಿಧಿಯ ಬಳಕೆಗೆ ಸಾರ್ವಜನಿಕ ಗಮನ ಹರಿಸಿದೆ.



