ನಾನು ಸಿಎಂ! vs ನಾನೇ ಸಿಎಂ! ದೆಹಲಿ ರಾಜಕೀಯ ರಣರಂಗ

ಮತ ಕಳವು ವಿರುದ್ಧದ ರ್ಯಾಲಿಗೆ ದೆಹಲಿಗೆ ಆಗಮಿಸಿರುವ ಕಾಂಗ್ರೆಸ್ ನಾಯಕರು, ಕರ್ನಾಟಕ ಭವನದಲ್ಲಿ ಬಣ ರಾಜಕೀಯದ ಶಕ್ತಿ ಪ್ರದರ್ಶನ ನಡೆಸಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬೆಂಬಲಿಗರು “ಶಿವಕುಮಾರ್ ಅವರೇ ಮುಂದಿನ ಮುಖ್ಯಮಂತ್ರಿ” ಎಂದು ಘೋಷಣೆ ಕೂಗಿದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಬಲಿಗರು “ಸಿದ್ದರಾಮಯ್ಯ ಅವರೇ ಐದು ವರ್ಷ ಮುಖ್ಯಮಂತ್ರಿ” ಎಂದು ಪ್ರತಿಘೋಷಣೆ ಮೊಳಗಿಸಿದರು.

ಹೈಕಮಾಂಡ್ ಸೂಚನೆಯಂತೆ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಪರಸ್ಪರ ಏರ್ಪಡಿಸಿದ್ದ ಉಪಾಹಾರ ಕೂಟದ ಬಳಿಕ ಬಣ ರಾಜಕೀಯ ತಾತ್ಕಾಲಿಕವಾಗಿ ಶಮನಗೊಂಡಿತ್ತು. ಆದರೆ ಅಧಿವೇಶನದ ಅವಧಿಯಲ್ಲೇ ಎರಡೂ ಬಣಗಳ ಚಟುವಟಿಕೆಗಳು ಮತ್ತೆ ಬಿರುಸು ಪಡೆದುಕೊಂಡಿವೆ.

ಇದೇ ವೇಳೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ರಾಜ್ಯದ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚಿಸಿದ್ದು, ಗೊಂದಲವನ್ನು ಶೀಘ್ರ ಬಗೆಹರಿಸಲಾಗುವುದು ಎಂಬ ಭರವಸೆ ದೊರೆತಿದೆ ಎನ್ನಲಾಗಿದೆ. ನಂತರ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರ ಜತೆಗೂ ಶಿವಕುಮಾರ್ ಸಮಾಲೋಚನೆ ನಡೆಸಿದ್ದಾರೆ.

ಇತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಮಾನ ವಿಳಂಬದ ಕಾರಣ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಯೋಜಿಸಿದ್ದ ಔತಣಕೂಟಕ್ಕೆ ಹಾಜರಾಗಲಿಲ್ಲ. ಭೋಜನದ ಬಳಿಕ ಅವರು ನೇರವಾಗಿ ರಾಮ್ ಲೀಲಾ ಮೈದಾನದ ರ್ಯಾಲಿಗೆ ತೆರಳಿದ್ದಾರೆ.

ವರದಿ: ರಂಜಿತ ರೇವಣ್ಣ ನಾಟನಹಳ್ಳಿ

About The Author