ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರ ನಿಧನದ ಹಿನ್ನೆಲೆಯಲ್ಲಿ, ಸಿದ್ದಗಂಗಾ ಮಠಾಧ್ಯಕ್ಷರಾದ ಸಿದ್ದಲಿಂಗ ಸ್ವಾಮಿಜಿಗಳು ದಾವಣಗೆರೆಯತ್ತ ಪ್ರಯಾಣ ಬೆಳೆಸಿದರು. ಶಾಮನೂರು ಶಿವಶಂಕರಪ್ಪ ಅವರ ಅಂತ್ಯಕ್ರಿಯೆ ಹಾಗೂ ಶ್ರದ್ಧಾಂಜಲಿ ಕಾರ್ಯಕ್ರಮಕ್ಕೆಂದು ಸಿದ್ದಗಂಗಾ ಮಠದಿಂದ ವಿಶೇಷವಾಗಿ ಸಿದ್ಧಪಡಿಸಿದ ವಿಭೂತಿ ಗಟ್ಟಿಯನ್ನು ದಾವಣಗೆರೆಗೆ ರವಾನೆ ಮಾಡಲಾಗಿದೆ.
ಸಿದ್ದಗಂಗಾ ಮಠದಿಂದ ಸುಮಾರು ನೂರು ವಿಭೂತಿ ಗಟ್ಟಿಗಳನ್ನು ಸಿದ್ಧಪಡಿಸಲಾಗಿದ್ದು, ಅವುಗಳನ್ನು ಸಿದ್ದಗಂಗಾ ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮಿಜಿಗಳು ತಮ್ಮದೇ ವಾಹನದಲ್ಲಿ ಕೊಂಡೊಯ್ದಿದ್ದಾರೆ. ಶಾಮನೂರು ಶಿವಶಂಕರಪ್ಪ ಅವರೊಂದಿಗೆ ಸಿದ್ದಗಂಗಾ ಮಠಕ್ಕೆ ದೀರ್ಘಕಾಲದ ಆತ್ಮೀಯ ಸಂಬಂಧವಿದ್ದು, ಅವರ ನಿಧನಕ್ಕೆ ಮಠದ ಪರವಾಗಿ ಗಾಢ ಸಂತಾಪ ವ್ಯಕ್ತಪಡಿಸಲಾಗಿದೆ.
ವರದಿ: ರಂಜಿತ ರೇವಣ್ಣ ನಾಟನಹಳ್ಳಿ




