HDK ಜನ್ಮದಿನ ವಿಶೇಷ : JDS ಕಾರ್ಯಕರ್ತರಿಗೆ ಕರೆ

ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ, ತುರುವೇಕೆರೆ ತಾಲ್ಲೂಕಿನ ಜೆಡಿಎಸ್ ಕಾರ್ಯಕರ್ತರು, ಮುಖಂಡರು ಹಾಗೂ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಜೆಡಿಎಸ್ ತಾಲ್ಲೂಕು ಅಧ್ಯಕ್ಷ ದೊಡೇಗೌಡರು ಕರೆ ನೀಡಿದ್ದಾರೆ.

ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೆಚ್.ಡಿ. ಕುಮಾರಸ್ವಾಮಿ ಅವರ ಜನ್ಮದಿನದ ಅಂಗವಾಗಿ ನಾಳೆ ತುರುವೇಕೆರೆ ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಗಳು ಹಾಗೂ ಸರ್ಕಾರಿ ಶಾಲೆಗಳಲ್ಲಿ ಉಚಿತ ಹಣ್ಣು ಹಂಪಲು ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಈ ಸಾಮಾಜಿಕ ಸೇವಾ ಕಾರ್ಯಕ್ರಮಕ್ಕೆ ಜೆಡಿಎಸ್ ಕಾರ್ಯಕರ್ತರು, ಪಕ್ಷದ ಮುಖಂಡರು ಹಾಗೂ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ದೊಡೇಗೌಡರು ಮನವಿ ಮಾಡಿದರು.

ವರದಿ: ರಂಜಿತ ರೇವಣ್ಣ ನಾಟನಹಳ್ಳಿ

About The Author