ಗ್ರಾಹಕರಿಗೆ ಬಿಗ್ ರಿಲೀಫ್: ಚಿನ್ನ-ಬೆಳ್ಳಿ ದರ ಕುಸಿತ

ಚಿನ್ನದ ಮಾರುಕಟ್ಟೆಯಲ್ಲಿ ಮತ್ತೆ ಅಚ್ಚರಿ ಮೂಡಿಸುವ ಬೆಳವಣಿಗೆಯಾಗಿದೆ. ದಾಖಲೆ ಮಟ್ಟ ತಲುಪಿದ್ದ ಚಿನ್ನದ ಬೆಲೆಯಲ್ಲಿ ಇಂದು ತಾತ್ಕಾಲಿಕ ಬ್ರೇಕ್ ಬಿದ್ದಂತಾಗಿದ್ದು, ಗ್ರಾಹಕರಿಗೂ ಹೂಡಿಕೆದಾರರಿಗೂ ಸ್ವಲ್ಪ ನಿಟ್ಟುಸಿರು ಬಿಡುವಂತಾಗಿದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆಯಲ್ಲಿ ಇಳಿಕೆ ದಾಖಲಾಗಿದ್ದು, ಇಂದಿನ ವ್ಯಾಪಾರದಲ್ಲಿ ಬೆಲೆಯಲ್ಲಿ ಇಳಿಕೆ ಕಂಡುಬಂದಿದೆ.

ಇದರೊಂದಿಗೆ ಬೆಳ್ಳಿ ಬೆಲೆಯಲ್ಲೂ ಇಳಿಕೆ ಕಾಣಿಸಿಕೊಂಡಿದ್ದು, ಚಿನ್ನ–ಬೆಳ್ಳಿ ಮಾರುಕಟ್ಟೆಯಲ್ಲಿ ಇಂದು ಕುಸಿತದ ಅಲೆ ಕಾಣಿಸಿದೆ. ಡಿಸೆಂಬರ್ 19 ಶುಕ್ರವಾರದಂದು ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ ಗ್ರಾಂ ಒಂದಕ್ಕೆ 13418 ರೂಪಾಯಿ ಇದ್ದು, ಇಂದು 66 ರೂಪಾಯಿ ಕಡಿತ ಆಗಿದೆ. 10 ಗ್ರಾಂ ಶುದ್ಧ ಚಿನ್ನಕ್ಕೆ 1,34,180 ರೂಪಾಯಿ ಇದೆ. 24 ಕ್ಯಾರೆಟ್ 10 ಗ್ರಾಂ ಬೆಲೆಯಲ್ಲಿ ಇಂದು 660 ರೂ ಇಳಿಕೆ ಆಗಿದೆ.

22 ಕ್ಯಾರೆಟ್ 1 ಗ್ರಾಂ ಬೆಲೆ 12300 ರೂಪಾಯಿ ಇದ್ದು, ಇಂದು 60 ರೂ ಇಳಿಕೆ ಆಗಿದೆ. 10 ಗ್ರಾಂ ಬೆಲೆ 1,23,000 ರೂಪಾಯಿ ಇದೆ. ಇಂದು 10 ಗ್ರಾಂ ನಲ್ಲಿ 600 ರೂ ಕಡಿತ ಆಗಿದೆ. ಇನ್ನು ಬೆಂಗಳೂರಲ್ಲಿ 1 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 13418 ರೂಪಾಯಿ ಇದ್ದು, 10 ಗ್ರಾಂ ಶುದ್ಧ ಚಿನ್ನಕ್ಕೆ 1,34,180 ರೂಪಾಯಿ ಇದೆ.

ಈ ಬೆಲೆಯಲ್ಲಿ ಜಿಎಸ್‌ಟಿ ಸೇರಿಲ್ಲ, ಹೀಗಾಗಿ ಮಳಿಗೆಗಳಲ್ಲಿ ವ್ಯತ್ಯಾಸ ಇರಲಿದೆ. ಬೆಳ್ಳಿ ಬೆಲೆ ಇಂದು ಇಳಿಕೆ ಆಗಿದ್ದು, 2 ರೂ ಇಳಿಕೆ ಆಗಿ ಬೆಲೆ 209 ರೂ ಆಗಿದ್ದು, ಕೆಜಿಗೆ 2,09,000 ರೂ ಇದೆ. ಒಟ್ಟಿನಲ್ಲಿ, ದಾಖಲೆ ಮಟ್ಟ ತಲುಪಿದ್ದ ಚಿನ್ನದ ಬೆಲೆಯಲ್ಲಿ ಇಂದು ತಾತ್ಕಾಲಿಕ ಇಳಿಕೆ ಕಂಡುಬಂದಿದೆ. ಗ್ರಾಹಕರಿಗೆ ಇದು ಸ್ವಲ್ಪ ನೆಮ್ಮದಿ ನೀಡುವ ಬೆಳವಣಿಗೆಯಾದರೂ, ಮಾರುಕಟ್ಟೆ ತಜ್ಞರು ಮುಂದಿನ ದಿನಗಳಲ್ಲಿ ಮತ್ತೆ ಏರಿಳಿತ ಸಾಧ್ಯತೆ ಇದೆ ಎಂದು ಎಚ್ಚರಿಸುತ್ತಿದ್ದಾರೆ.

ವರದಿ : ಲಾವಣ್ಯ ಅನಿಗೋಳ

About The Author