ಇತ್ತೀಚೆಗಷ್ಟೆ ಬಿಹಾರ ವಿಧಾನಸಭಾ ಚುನಾವಣೆ ನಡೆದಿದೆ. ಬಿಹಾರದಲ್ಲಿ NDA ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿದ್ದು, ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಇದೀಗ ತಮಿಳುನಾಡು ವಿಧಾನಸಭೆಗೆ ಮುಂದಿನ ವರ್ಷ ನಡೆಯಲಿರುವ ಚುನಾವಣೆಯಲ್ಲಿ ಅನುಸರಿಸಬೇಕಾದ ಕಾರ್ಯತಂತ್ರದ ಕುರಿತು, ರಾಷ್ಟ್ರೀಯ ಜನತಾಂತ್ರಿಕ ಮೈತ್ರಿಕೂಟದ ಅಂಗಪಕ್ಷಗಳಾದ, ಎಐಎಡಿಎಂಕೆ ಮತ್ತು ಬಿಜೆಪಿ ಪ್ರಾಥಮಿಕ ಮಾತುಕತೆಯನ್ನು ಆರಂಭಿಸಿದ್ದಾರೆ.
ಬಿಜೆಪಿ ನಾಯಕ ಪಿಯೂಷ್ ಗೋಯಲ್ ಮತ್ತು AIADMK ಮುಖ್ಯಸ್ಥ ಏಡಪ್ಪಾಡಿ ಪಳನಿಸ್ವಾಮಿ ಸಮಾಲೋಚನೆ ನಡೆಸಿದ್ದಾರೆ. ಇನ್ನು, 2026ರ ಮಾರ್ಚ್, ಏಪ್ರಿಲ್ ವೇಳೆಗೆ ಚುನಾವಣೆ ನಡೆಯಲಿದ್ದು, ಸಿದ್ಧತೆಗಳ ಕುರಿತು ತಾವಿಬ್ಬರೂ ಚರ್ಚಿಸಿದ್ದಾಗಿ ಗೋಯಲ್ ತಿಳಿಸಿದರು. ಚುನಾವಣೆಯಲ್ಲಿ ಎನ್‌ಡಿಎ ಭರ್ಜರಿ ಜಯ ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇನ್ನು, ಜನವಿರೋಧಿ ಡಿಎಂಕೆ ಸರ್ಕಾರವನ್ನು ಸೋಲಿಸುವ ಕಾರ್ಯತಂತ್ರಗಳ ಬಗ್ಗೆ ಹೆಚ್ಚಿನ ಗಮನ ನೀಡಲಾಯಿತು ಎಂದು ಪಳನಿಸ್ವಾಮಿ ಹೇಳಿದರು. ಸ್ಥಾನ ಹೊಂದಾಣಿಕೆ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿಲ್ಲವೆಂದು ತಮಿಳುನಾಡು ಬಿಜೆಪಿ ಮುಖ್ಯಸ್ಥ ನೈನಾರ್ ನಾಗೇಂದ್ರನ್ ಸ್ಪಷ್ಟಪಡಿಸಿದ್ದಾರೆ.
ವರದಿ: ರಂಜಿತ ರೇವಣ್ಣ ನಾಟನಹಳ್ಳಿ




