Davanagere: ದಾವಣಗೆರೆಯಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ ಅವರು ರೈಲ್ವೇ ಪ್ರಯಾಣ ದರ ಏರಿಕೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬಿಜೆಪಿಯವರು ಈ ಬಗ್ಗೆ ಎಲ್ಲ ಮಾತನಾಡುವುದಿಲ್ಲ. ಅದೇ ನಾವು ಯಾವುದಾದರೂ ವಸ್ತುವಿನ ಬೆಲೆ ಹೆಚ್ಚಿಸಿದರೆ, ಎಲ್ಲ ಲೀಡರ್‌ಗಳು ಕೂಡ ಮಾತನಾಡಲು ಶುರು ಮಾಡುತ್ತಾರೆ. ಕೇಂದ್ರ ಸರ್ಕಾರ ರೈಲ್ವೆ ಪ್ರಯಾಣ ದರ ಏರಿಕೆ ಮಾಡಿದೆ. ಜನಸಾಮಾನ್ಯರ ಮೇಲೆ ದರ ಏರಿಕೆ ಹೊರೆಯಾಗುತ್ತಿರುವ ಬಗ್ಗೆ ರಾಜ್ಯದ ಬಿಜೆಪಿ ನಾಯಕರು ಪ್ರಶ್ನಿಸುವುದಿಲ್ಲ. ಬಿಜೆಪಿ ನಾಯಕರ ಜಾಣಮೌನಕ್ಕೆ ಜನರೇ ಬುದ್ದಿ ಕಲಿಸುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಇನ್ನು ಚಿತ್ರದುರ್ಗ ಅಪಘಾತ ಪ್ರಕರಣದ ಬಗ್ಗೆ ಮಾತನಾಡಿರುವ ಸಿಎಂ, ಚಿತ್ರದುರ್ಗದ ಹಿರಿಯೂರು ಬಳಿಯ ಬಸ್ ಮತ್ತು ಟ್ರಕ್ ನಡುವಿನ ಅಪಘಾತದಲ್ಲಿ ಟ್ರಕ್ ಚಾಲನ ತಪ್ಪಿರುವುದಾಗಿ ಮೇಲ್ನೋಟಕ್ಕೆ ಕಂಡು ಬರುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಟ್ರಕ್ ವಿಭಜಕವನ್ನು ದಾಟಿ ಬಸ್ ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ 4 ಮಹಿಳೆಯರು ಹಾಗೂ ಒಂದು ಮಗು ಹಾಗೂ ಟ್ರಕ್ ಚಾಲಕ ಸಾವಿಗೀಡಾಗಿದ್ದಾರೆ. ಬಸ್ಸುಗಳು ಎಲ್ಲಾ ಸುರಕ್ಷತೆಯ ಕ್ರಮಗಳನ್ನು ಅನುಸರಿಸುವುದು ಅವಶ್ಯಕ. ಅಪಘಾತದ ಬಗ್ಗೆ ಸೂಕ್ತ ತನಿಖೆ ನಡೆಸಲಾಗುವುದು ಎಂದಿದ್ದಾರೆ.




