ನಟ ಸುದೀಪ್ ಜನ್ಮದಿನದ ಪ್ರಯುಕ್ತ ಬಹುನಿರೀಕ್ಷಿತ ಕೋಟಿಗೊಬ್ಬ 3 ಚಿತ್ರದ ಟೀಸರ್ನ್ನ ಬಿಡುಗಡೆ ಮಾಡಿದೆ ಚಿತ್ರತಂಡ.ಕೋಟಿಗೊಬ್ಬ ಹೆಸರಿನಲ್ಲಿ ಸ್ಯಾಂಡಲ್ವುಡ್ಗೆ ಎಂಟ್ರಿ ಕೊಡ್ತಿರೋ ಮೂರನೇ ಸಿನಿಮಾ ಇದಾಗಿದ್ದು ಚಿತ್ರದ ಟೀಸರ್ ಭಾರಿ ಸದ್ದು ಮಾಡ್ತಿದೆ.
ಕೋಟಿಗೊಬ್ಬ 3 ಸಿನಿಮಾದಲ್ಲಿ ಕಿಚ್ಚ ಸುದೀಪನಿಗೆ ಜೋಡಿಯಾಗಿ ಕಾಣಿಸಿಕೊಂಡಿದ್ದಾರೆ ನಟಿ ಮಡೋನಾ ಸೆಬಾಸ್ಟಿಯನ್ ಮತ್ತು ಶ್ರದ್ಧಾ.ಸೂರಪ್ಪ ಬಾಬು ನಿರ್ಮಾಣದ ಈ ಚಿತ್ರಕ್ಕೆ ಶಿವಕಾರ್ತಿಕ್ ಆಕ್ಷನ್ ಕಟ್ ಹೇಳಿದ್ದಾರೆ. ಚಿತ್ರಕ್ಕೆ ಅರ್ಜುನ್ ಜನ್ಯಾ ಸಂಗೀತ ಝೇಂಕಾರವಿದೆ. ಇನ್ನು ಕೋಟಿಗೊಬ್ಬ 3 ಸಿನಿಮಾದ ಮೂಲಕ ಬಾಲಿವುಡ್ ನಟ ಅಫ್ತಾಬ್ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟಂತಾಗಿದೆ.
ಅಭಿನಯ ಚಕ್ರವರ್ತಿ ಜನ್ಮದಿನದ ಪ್ರಯುಕ್ತ ಟೀಸರ್ ಲಾಂಚ್ ಮಾಡುತ್ತಿದ್ದೇವೆ ಎಂಬ ಗುಟ್ಟನ್ನ 2 ದಿನದ ಹಿಂದೆಯೇ ಬಿಟ್ಟುಕೊಟ್ಟಿತ್ತು ಚಿತ್ರತಂಡ . ಅದರಂತೆಯೇ ಟೀಸರ್ ಸೋಶಿಯಲ್ ಮೀಡಿಯಾದಲ್ಲಿ ಔಟ್ ಆಗಿದ್ದು ಅಭಿಮಾನಿಗಳು ಫುಲ್ ಖುಶ್ ಆಗಿದ್ದಾರೆ.