Mandya News: ಮಂಡ್ಯ: ಮದ್ದೂರು ನಗರಸಭೆಗೆ ಗೆಜ್ಜಲಗೆರೆ ಗ್ರಾಮ ಪಂಚಾಯ್ತಿ ಸೇರ್ಪಡೆ ಹಿನ್ನಲೆ. ಇದನ್ನು ಖಂಡಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.
ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗೆಜ್ಜಲಗೆರೆ ಗ್ರಾಮ ಪಂಚಾಯ್ತಿ ಸೇರ್ಪಡೆಯಾಗುತ್ತಿರುವ ಹಿನ್ನೆಲೆ, ಇಲ್ಲಿನ ಗ್ರಾಮಸ್ಥರು ಗ್ರಾಮ ಪಂಚಾಯ್ತಿ ಮುಂದೆ ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸಿದ್ದಾರೆ. ಇನ್ನು ಇವರಿಗೆ ಬಿಜೆಪಿ ನಾಯಕರು ಸಾಥ್ ನೀಡಿದ್ದಾರೆ.
ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಛಲವಾದಿ ನಾರಾಯಣ್ ಸ್ವಾಮಿ, ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್, ಎಸ್ಪಿ ಸ್ವಾಮಿ, ಇಂಡವಾಳು ಸಚ್ಚಿದಾನಂದ, ಅಶೋಕ್ ಜಯರಾಮ್, ರೈತ ಮೋರ್ಚಾ ಅಶೋಕ್, ಸುನಂದಾ ಜಯರಾಮ್ ಸೇರಿ ಗ್ರಾಮಸ್ಥರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.
ಮದ್ದೂರು ಪುರಸಭೆಯಾಗಿತ್ತು. ಆದರೆ ರಾಜ್ಯ ಸರ್ಕಾರ ಪುರಸಭೆಯನ್ನ ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸಿದೆ.
ಮದ್ದೂರು ಪಟ್ಟಣದ ಸುತ್ತಮುತ್ತಲ ಗ್ರಾಮ ಪಂಚಾಯ್ತಿಯನ್ನೊಳಗೊಂಡಿರೊ ಮದ್ದೂರು ನಗರಸಭೆ.
ಇದೀಗ ತಮ್ಮ ಗ್ರಾಮ ಪಂಚಾಯ್ತಿಯನ್ನ ನಗರಸಭೆಯಿಂದ ಕೈಬಿಡುವಂತೆ ಒತ್ತಾಯಿಸಿ ಗ್ರಾಮಸ್ಥರು ಪ್ರತಿಭಟಿಸುತ್ತಿದ್ದಾರೆ.




