Political News: ಬೆಳಗಾವಿಯಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಡಿಜಿಪಿ ರಾಮಚಂದ್ರರಾವ್ ಕೇಸ್ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ಡಿಜಿಪಿ ರಾಮಚಂದ್ರರಾವ್ ಅವರು ಮಹಿಳೆಯರೊಂದಿಗೆ ಅನುಚಿತ ವರ್ತನೆ ತೋರಿರುವ ಬಗ್ಗೆ ಸೂಕ್ತ ವಿಚಾರಣೆ ನಡೆಸಿ, ಅವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ಉನ್ನತ ಮಟ್ಟದ ಅಧಿಕಾರಿಯಾದ ಮಾತ್ರಕ್ಕೆ ಕಾನೂನಿಗಿಂತ ಯಾರೂ ದೊಡ್ಡವರಲ್ಲ ಎಂದು ಸಿಎಂ ಹೇಳಿದ್ದಾರೆ.
ಇನ್ನು ಜನಾರ್ಧನ ರೆಡ್ಡಿ ವಿರುದ್ಧ ವಾಗ್ದಾಳಿ ನಡೆಸಿರುವ ಸಿಎಂ, ಜನಾರ್ಧನ ರೆಡ್ಡಿಯವರೇ ರಾಜ್ಯದ ಸಂಪತ್ತನ್ನು ಲೂಟಿ ಮಾಡಿ ಜೈಲಿಗೆ ಹೋಗಿ ಬಂದವರು. ಸರ್ವೋಚ್ಛ ನ್ಯಾಯಾಲಯದಲ್ಲಿ ಅವರ ಪ್ರಕರಣವಿನ್ನೂ ನಡೆಯುತ್ತಿದೆ. ಇವರಿಗೆ ಆರೋಪಿಸಲು ಯಾವುದೇ ನೈತಿಕ ಅಧಿಕಾರವಿಲ್ಲ. ವಿರೋಧ ಪಕ್ಷಗಳು ಸುಳ್ಳು ಆರೋಪಗಳನ್ನು ಮಾಡುವುದರಲ್ಲಿ ನಿರತವಾಗಿದ್ದು, ಜನರನ್ನು ದಾರಿತಪ್ಪಿಸುತ್ತಿದ್ದಾರೆ. ಜನವರಿ 22 ರಿಂದ ವಿಧಾನಸಭೆ ಅಧಿವೇಶನ ಪ್ರಾರಂಭವಾಗುತ್ತಿದ್ದು, ಹಾದಿಬೀದಿಯಲ್ಲಿ ಆರೋಪ ಮಾಡುವುದು ಬಿಟ್ಟು ಅಧಿವೇಶನದಲ್ಲಿ ವಿರೋಧ ಪಕ್ಷಗಳು ನೇರಾನೇರ ಚರ್ಚೆ ನಡೆಸಲಿ ಎಂದು ಸವಾಲ್ ಹಾಕಿದ್ದಾರೆ.
ಮಹಾರಾಷ್ಟ್ರ ಸರ್ಕಾರ ಗಡಿ ವಿವಾದ ಸಂಬಂಧ ಸಲ್ಲಿಸಿರುವ ಅರ್ಜಿಯ ವಿರುದ್ಧ ವಾದ ಮಂಡಿಸಲು ಕರ್ನಾಟಕ ಕಾನೂನು ತಂಡ ಸಿದ್ಧವಾಗಿದೆ. ರಾಜ್ಯದ ಗಡಿಯ ಬಗ್ಗೆ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲು ಮಹಾರಾಷ್ಟ್ರದ ಅಧಿಕಾರ ವ್ಯಾಪ್ತಿಗೆ ಬರುತ್ತದೆಯೇ ಎಂಬ ಬಗ್ಗೆಯೇ ನಮ್ಮ ಪ್ರಶ್ನೆಯಿದ್ದು, ಈ ವಿಚಾರ ಮೊದಲು ಇತ್ಯರ್ಥವಾಗಬೇಕು ೆಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.




