ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವನ್ನಪ್ಪಿರುವ ಆರೋಪ ಮಾಡಲಾಗಿದೆ.
ಆಸ್ಪತ್ರೆ ಎದುರು ಶವವಿಟ್ಟು ಕುಟುಂಬಸ್ಥರು ಪ್ರತಿಭಟನೆ ಮಾಡಿದ ಘಟನೆ, ಬೀದರ್ ಜಿಲ್ಲೆಯಲ್ಲಿ ನಡೆದಿದೆ. ಚಿಮಕೋಡ್ ಗ್ರಾಮದ 26 ವರ್ಷದ ಮೀನಾಕ್ಷಿ ಎಂಬುವರನ್ನು, ಸಂತಾನಹರಣ ಶಸ್ತ್ರಚಿಕಿತ್ಸೆಗಾಗಿ ಎಫ್‌ಪಿಎ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶಸ್ತ್ರಚಿಕಿತ್ಸೆ ಏನೋ ಮುಗಿದಿದೆ.
ಬಳಿಕ ಶೌಚಾಲಯಕ್ಕೆ ತೆರಳುವ ವೇಳೆ ಬಾಣಂತಿ ಕುಸಿದು ಬಿದ್ದಿದ್ದಾರೆ. ಆ ವೇಳೆ ವೈದ್ಯರು ಇಂಜಕ್ಷನ್ ನೀಡಿದ್ದಾರೆ. ಇದ್ರಿಂದ ಬಾಣಂತಿ ಆರೋಗ್ಯದಲ್ಲಿ ಏರುಪಾರಾಗಿದೆ ಎಂಬ ಆರೋಪ ಕೇಳಿಬಂದಿದೆ. ತಕ್ಷಣವೇ ಬಾಣಂತಿಯನ್ನು, ಬ್ರಿಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಷ್ಟರಲ್ಲಾಗಲೇ ಬಾಣಂತಿ ಸಾವನ್ನಪ್ಪಿದ್ದು, ಇದನ್ನ ವೈದ್ಯರು ದೃಢಪಡಿಸಿದ್ದಾರೆ. ಸಿಟ್ಟಿಗೆದ್ದ ಕುಟುಂಬಸ್ಥರು, ಸಂಬಂಧಿಕರು, ಎಫ್‌ಪಿಎ ಆಸ್ಪತ್ರೆ ಎದುರು ಮೃತದೇಹವಿಟ್ಟು ಪ್ರತಿಭಟನೆಗೆ ಮುಂದಾಗಿದ್ರು.ಬಾಣಂತಿ ಸಾವಿಗೆ ನ್ಯಾಯ ಒದಗಿಸಿ ಕೊಡುವಂತೆ ಆಗ್ರಹಿಸಿದ್ದಾರೆ.




