ಗಡಿ ಜಿಲ್ಲೆ ಬೀದರ್‌ನಲ್ಲೂ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿತ್ತು. ನಗರದ ನೆಹರು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವ ಈಶ್ವರ್ ಖಂಡ್ರೆ ಭಾಗಿಯಾಗಿದ್ದು, ಧ್ವಜಾರೋಹಣ ನೆರವೇರಿಸಿದ್ರು. ಸಂಸದ ಸಾಗರ್ ಖಂಡ್ರೆ, ಶಾಸಕ ಶೈಲೇಂದ್ರ ಬೆಲ್ದಾಳೆ, ಡಿಸಿ ಶಿಲ್ಪಾ ಶರ್ಮಾ, ಎಸ್‌ಪಿ ಪ್ರದೀಪ್ ಗುಂಟಿ ಸೇರಿ ಹಲವು ಗಣ್ಯರು ಹಾಗೂ ಸಾವಿರಾರು ವಿದ್ಯಾರ್ಥಿಗಳು ಭಾಗಿಯಾಗಿದ್ರು. ಇನ್ನು, ಪೊಲೀಸ್ ತುಕಡಿಗಳು, ವಿದ್ಯಾರ್ಥಿಗಳು, ಕವಾಯತ್ ತಂಡಗಳ ಆಕರ್ಷಕ ಪಥ ಸಂಚಲನ, ನೋಡುಗರ ಮೆಚ್ಚುಗೆಗೆ ಪಾತ್ರವಾಗಿತ್ತು.




