ಕನ್ನಡ ಭವನ ನಿರ್ಮಾಣ ಕಾಮಗಾರಿಗೆ ಚಾಲನೆ

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸವಿನೆನಪಿಗಾಗಿ 5.50 ಕೋಟಿ ರೂ. ವೆಚ್ಚದಲ್ಲಿ ಕನ್ನಡ ಭವನ ನಿರ್ಮಾಣ ಮಾಡೋದಕ್ಕಾಗಿ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿದರು. ಮಂಡ್ಯ ನಗರದ ಸರ್ ಎಂ. ವಿಶ್ವೇಶ್ವರಯ್ಯ ಒಳಾಂಗಣ ಕ್ರೀಡಾಂಗಣದ ಆವರಣದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಪರಮಪೂಜ್ಯ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ಹಾಗೂ ಮಾನ್ಯ ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚಲುವರಾಯಸ್ವಾಮಿ ಅವರು ಕನ್ನಡ ಭವನ ನಿರ್ಮಾಣದ ಶಂಕುಸ್ಥಾಪನೆ ನೆರವೇರಿಸಿದ್ರು‌.

ಕನ್ನಡದ ಐಕ್ಯತೆಯ ಧ್ಯೋತಕವಾಗಿ ನಮ್ಮ ಸಾಹಿತ್ಯ, ಸಂಸ್ಕೃತಿ, ಪರಂಪರೆಯನ್ನು ಬಿಂಬಿಸುವ ಹಾಗೂ ನಾಡು-ನುಡಿಯ ಬಗೆಗಿನ ಅಭಿಮಾನವನ್ನು ಜನ ಮನದಲ್ಲಿ ಮೂಡಿಸುವ ನಿಟ್ಟಿನಲ್ಲಿ ಸರ್ವೆ ನಂ 2ರ ಸರ್ಕಾರಿ ಜಮೀನಿನಲ್ಲಿ ಕನ್ನಡ ಭವನ ನಿರ್ಮಿಸುವ ಉದ್ದೇಶಕ್ಕಾಗಿ ಜಾಗವನ್ನು ಗುರುತಿಸಲಾಗಿದೆ.

ಈ ಸಂದರ್ಭದಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ರವಿಕುಮಾರ್, ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ದರ್ಶನ ಪುಟ್ಟಣ್ಣಯ್ಯ , ಮೂಡ ಅಧ್ಯಕ್ಷರಾದ ಬಿ.ಪಿ.ಪ್ರಕಾಶ್, ಜಿಲ್ಲಾಧಿಕಾರಿಗಳಾದ ಡಾ. ಕುಮಾರ್, ಜಿಪಂ ಸಿಇಒ ನಂದಿನಿ, ಪೊಲೀಸ್ ವರಿಷ್ಠಾಧಿಕಾರಿ ಡಾ ವಿ.ಜೆ. ಶೋಭಾರಾಣಿ ಹಾಗೂ ಇತರೆ ಗಣ್ಯರು ಉಪಸ್ಥಿತರಿದ್ದರು.

About The Author