ಇಂದೇ ಹೊಸ DCM ಆಯ್ಕೆ! ಸಂಜೆಯೇ ಪ್ರಮಾಣ!

ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ನಾಯಕಿ ಮತ್ತು ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್, ಮಹಾರಾಷ್ಟ್ರದ ನೂತನ ಉಪಮುಖ್ಯಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬುಧವಾರ ಬಾರಾಮತಿಯಲ್ಲಿ ಸಂಭವಿಸಿದ ವಿಮಾನ ದುರಂತದಲ್ಲಿ ಅಜಿತ್ ಪವಾರ್ ಸಾವನ್ನಪ್ಪಿದ್ರು. ಅವರಿಂದ ತೆರವಾಗಿದ್ದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಸುನೇತ್ರಾ ಪವಾರ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದ್ದು, ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಎನ್‌ಸಿಪಿಯ ಎಲ್ಲಾ ಶಾಸಕರು, ಈ ಪ್ರಸ್ತಾವನೆಯನ್ನು ಒಪ್ಪಿಕೊಂಡಿದ್ದಾರಂತೆ. ಪಕ್ಷದ ನಾಯಕ ಛಗನ್ ಭುಜಬಲ್ ಈ ಬೆಳವಣಿಗೆಯನ್ನು ದೃಢಪಡಿಸಿದ್ದಾರೆ. ಪ್ರಸ್ತುತ ರಾಜ್ಯಸಭಾ ಸಂಸದೆಯಾಗಿರುವ ಸುನೇತ್ರಾ ಅವರು ರಾಜ್ಯದಲ್ಲಿ ಈ ಹುದ್ದೆಯನ್ನು ಅಲಂಕರಿಸುತ್ತಿರುವ ಮೊದಲ ಮಹಿಳೆಯಾಗಲಿದ್ದಾರೆ. ಮುಂಬೈನ ವಿಧಾನ ಭವನದಲ್ಲಿಎನ್‌ಸಿಪಿಯ ಶಾಸಕಾಂಗ ಪಕ್ಷದ ಸಭೆ ಶನಿವಾರ ಮಧ್ಯಾಹ್ನ 2 ಗಂಟೆಗೆ ನಡೆಯಲಿದ್ದು, ಅಲ್ಲಿ ಸುನೇತ್ರಾ ಅವರನ್ನು ಪಕ್ಷದ ನಾಯಕಿಯಾಗಿ ಔಪಚಾರಿಕವಾಗಿ ಆಯ್ಕೆ ಮಾಡಲಾಗುವುದು.

ನಂತರ ಸಂಜೆ 5 ಗಂಟೆಗೆ ಸುನೇತ್ರಾ ಪವಾರ್ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಈ ಮೂಲಕ ಅವರು ಮಹಾರಾಷ್ಟ್ರದ ಮೊದಲ ಮಹಿಳಾ ಉಪಮುಖ್ಯಮಂತ್ರಿಯಾಗಲಿದ್ದಾರೆ. ಸುನೇತ್ರಾ ಪವಾರ್ ಪ್ರಸ್ತುತ ರಾಜ್ಯಸಭಾ ಸದಸ್ಯೆಯಾಗಿದ್ದು, ಮಹಾರಾಷ್ಟ್ರ ವಿಧಾನಸಭೆಯ ಎರಡೂ ಸದನಗಳ ಸದಸ್ಯರಲ್ಲ. ಆದರೂ ಅವರ ಹೆಸರನ್ನು ಆಯ್ಕೆ ಮಾಡಲಾಗಿದೆ.ಇನ್ನು, ಟ್ರಬಲ್‌ ಶೂಟರ್‌ ಪ್ರಫುಲ್ ಪಟೇಲ್ ಅವರನ್ನು ಎನ್‌ಸಿಪಿಯ ರಾಷ್ಟ್ರಾಧ್ಯಕ್ಷರನ್ನಾಗಿ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ.

About The Author