ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಮತ್ತೊಂದು ಭಾರೀ ಅಪಘಾತ ತಪ್ಪಿದ ಘಟನೆ ನಡೆದಿದೆ. ಕೆಟ್ಟು ನಿಂತಿದ್ದ ಲಾರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ, ಬಸ್ ಚಾಲಕ ಸೇರಿದಂತೆ ಒಟ್ಟು 15 ಮಂದಿ ಗಾಯಗೊಂಡಿದ್ದಾರೆ.
ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ಮಾರನಗೆರೆ ಬಳಿ ಈ ಅಪಘಾತ ಸಂಭವಿಸಿದ್ದು, ಘಟನೆ ನಿನ್ನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಸಿಗಂಧೂರು ಚೌಡೇಶ್ವರಿ ದೇವಿಯ ದರ್ಶನ ಮುಗಿಸಿ ಬೆಂಗಳೂರಿಗೆ ವಾಪಾಸ್ ಆಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಬಸ್ ಡಿಕ್ಕಿಯಾದ ರಭಸಕ್ಕೆ ಚಾಲಕ ಮಾರುತಿ, ಶೀತಲ್, ಜಗದಂಬ, ರತ್ನ ಸೇರಿದಂತೆ 15 ಮಂದಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ತಕ್ಷಣ ಶಿರಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ತಾವರೇಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
ವರದಿ : ಲಾವಣ್ಯ ಅನಿಗೋಳ




