ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಬಜೆಟ್‌ಗಳಲ್ಲಿ, ಇದು ಅತ್ಯಂತ ದುರ್ಬಲ ಬಜೆಟ್: ಡಾ.ಜಿ.ಪರಮೇಶ್ವರ್

Political News: ನಿನ್ನೆ ಫೆಬ್ರವರಿ 1ರಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್‌ ಮಂಡಿಸಿದ್ದು, ಈ ಬಗ್ಗೆ ಹಲವು ನಾಯಕರು ಪರ ವಿರೋಧ ಪ್ರತಿಕ್ರಿಯೆ ನೀಡಿದ್ದಾರೆ.

ಈ ಬಗ್ಗೆ ಿಂದು ಮಾತನಾಡಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು, ದೇಶದ ಅಭಿವೃದ್ಧಿಗಾಗಿ ಬಜೆಟ್‌ನಲ್ಲಿ ಜನ ಸಮುದಾಯ ಅನೇಕ ನಿರೀಕ್ಷೆಗಳನ್ನು ಮಾಡಿತ್ತು. ಎಲ್ಲವು ಹುಸಿಯಾಗಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 9 ಬಜೆಟ್‌ಗಳಲ್ಲಿ, ಇದು ಅತ್ಯಂತ ದುರ್ಬಲ ಬಜೆಟ್ ಎಂದು ಪರಮೇಶ್ವರ್ ಹೇಳಿದ್ದಾರೆ.

ಈ ಹಿಂದೆ ಬಜೆಟ್‌ಗಳನ್ನು ಕೃಷಿ, ಕೈಗಾರಿಕಾ ವಲಯಗಳಿಗೆ ಹೆಚ್ಚು ಪ್ರಾತಿನಿಧ್ಯ ಕೊಡುತ್ತಿದ್ದರು. ಬಡತನ ನಿರ್ಮೂಲನೆಗೆ ಸಂಬಂಧಿಸಿದಂತೆ ಅನೇಕ ಕಾರ್ಯಕ್ರಮಗಳನ್ನು ನೀಡುತ್ತಿದ್ದರು. ಮನಮೋಹನ್ ಸಿಂಗ್ ಅವರು ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ನೀಡಿದ್ದರು. ಇದೆಲ್ಲವನ್ನು ಗಾಳಿಗೆ ತೂರಿ, ಇಡೀ ದೇಶಕ್ಕೆ ನಿರಾಸೆ ಮಾಡಿದ್ದಾರೆ‌.

ದೇಶದಲ್ಲಿ ನೀರಾವರಿ, ಕೃಷಿ,‌ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಒತ್ತು ಕೊಡಬೇಕಿತ್ತು. ಕರ್ನಾಟಕಕ್ಕೆ ಹೇಳಿಕೊಳ್ಳುವಂತಹ ಒಂದೇಒಂದು ಯೋಜನೆಯನ್ನು ನೀಡಿಲ್ಲ. ವಿಶ್ವದಲ್ಲಿ ಶಿಕ್ಷಣ ವಲಯ ಸಾಕಷ್ಟು ವೇಗವಾಗಿ ಬದಲಾವಣೆ ಕಾಣುತ್ತಿದೆ. ದೇಶದಲ್ಲಿ ಶಿಕ್ಷಣವನ್ನೇ ಹಿಂದೆ ತಳ್ಳಿದ್ದಾರೆ. ರಾಜ್ಯಕ್ಕೆ ಐಐಟಿ, ಏಮ್ಸ್ ಸಂಸ್ಥೆಗಳನ್ನು ನಿರೀಕ್ಷೆ ಮಾಡಲಾಗಿತ್ತು. ನಿರಾಸೆ ಮೂಡಿಸಿದ್ದಾರೆ.

About The Author