ಮೈತ್ರಿ ಇಲ್ಲಾ, ಪ್ರತ್ಯೇಕ ಚುನಾವಣೆಗೆ ರೆಡಿ – ಪ್ರೀತಂ ಗೌಡ ಹೇಳಿದ್ದೇನು?

ಮಂಡ್ಯ ತಾಲ್ಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳನ್ನು ಬಿಜೆಪಿ ಸ್ವಂತ ಶಕ್ತಿಯ ಮೇಲೆ ಎದುರಿಸಲಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಸ್ಪಷ್ಟಪಡಿಸಿದ್ದಾರೆ.

ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತೀ ವಿಧಾನಸಭಾ ಕ್ಷೇತ್ರದಲ್ಲೂ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಕಾರ್ಯಕರ್ತರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಮಂಡ್ಯ ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ಬಿಜೆಪಿ ಸ್ವತಂತ್ರವಾಗಿ ಚುನಾವಣೆ ಎದುರಿಸಲು ಸಿದ್ಧವಾಗಿದೆ ಎಂದು ಹೇಳಿದ ಅವರು, “ಜಿಲ್ಲೆಯಲ್ಲಿ ಈಗಾಗಲೇ ಚುನಾವಣಾ ಸಿದ್ಧತೆ ಕುರಿತ ಸಭೆ ನಡೆಸಲಾಗಿದೆ. ಪಕ್ಷದ ಸಂಘಟನೆ ಬಲಪಡಿಸುವ ಬಗ್ಗೆ ಚರ್ಚೆ ಮಾಡಲಾಗಿದೆ.

ಮೈತ್ರಿ ಕುರಿತ ಯಾವುದೇ ತೀರ್ಮಾನ ಈ ಸಭೆಯಲ್ಲಿ ಆಗುವುದಿಲ್ಲ. ಆ ನಿರ್ಧಾರ ರಾಷ್ಟ್ರೀಯ ಮಟ್ಟದಲ್ಲಿ ಕೈಗೊಳ್ಳಲಾಗುತ್ತದೆ” ಎಂದು ಸ್ಪಷ್ಟಪಡಿಸಿದರು. ಪ್ರತಿ ಬೂತ್‌ನಲ್ಲೂ ಬಿಜೆಪಿಯದೇ ಶಕ್ತಿ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಪ್ರೀತಂ ಗೌಡ, ಹಿಂದಿನ ಪರಿಸ್ಥಿತಿ ಮತ್ತು ಇಂದಿನ ಪರಿಸ್ಥಿತಿ ಬೇರೆ ಬೇರೆ.

ಯಾವುದೇ ಅನುಮಾನ ಬೇಡ. ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಬಲಿಷ್ಠವಾಗಿದೆ. ಕಾರ್ಯಕರ್ತರ ಅಪೇಕ್ಷೆಯನ್ನು ಗೌರವಿಸಿ ಚುನಾವಣೆ ಎದುರಿಸುತ್ತೇವೆ. ಎಲ್ಲ ಕಾರ್ಯಕರ್ತರಿಗೆ ಶಕ್ತಿ ತುಂಬಿ ಗೆಲುವಿನತ್ತ ಸಾಗುತ್ತೇವೆ” ಎಂದು ಹೇಳಿದರು.

ವರದಿ : ಲಾವಣ್ಯ ಅನಿಗೋಳ

About The Author