ಇಂದು ಕಾರ್ಮಿಕ ಸಂಘಟನೆಗಳು ಭಾರತ್ ಬಂದ್ಗೆ ಕರೆ ನೀಡಿದ ಹಿನ್ನೆಲೆ, ತುಮಕೂರು ನಗರದಲ್ಲಿ ಹಲವು ಸಂಘಟನೆಗಳ ವತಿಯಿಂದ ಪ್ರತಿಭಟನೆ ಜರುಗಿತು. ಟೌನ್ ಹಾಲ್ ಸರ್ಕಲ್ನಲ್ಲಿ ಆರಂಭವಾದ ಪ್ರತಿಭಟನೆ, ಟೌನ್ ಹಾಲ್ ಸರ್ಕಲ್ನಿಂದ ಎಂಜಿ ರಸ್ತೆ, ಗುಂಚಿ ಸರ್ಕಲ್ ಮೂಲಕ ಅಶೋಕ ರಸ್ತೆಯಲ್ಲಿರುವ BSNL ಕಚೇರಿ ವರೆಗೆ ಕಾಲ್ನಡಿಗೆ ಜಾಥಾ ರೂಪದಲ್ಲಿ ಮುಂದುವರಿಯಿತು.
ಕಾರ್ಮಿಕರ ಕೆಲಸದ ಅವಧಿಯನ್ನು ಕಡಿಮೆ ಮಾಡಬೇಕು, ವಿದ್ಯುತ್ ಖಾಸಗೀಕರಣವನ್ನು ರದ್ದುಪಡಿಸಬೇಕು, ಕಾರ್ಮಿಕ ವಿರೋಧಿ ನಾಲ್ಕು ಸಂಹಿತೆಗಳನ್ನು ಹಿಂತೆಗೆದುಕೊಳ್ಳಬೇಕು ಹಾಗೂ ಗುತ್ತಿಗೆ ಪದ್ಧತಿಯನ್ನು ರದ್ದುಪಡಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ನೂರಾರು ಕಾರ್ಮಿಕರು ಭಾಗವಹಿಸಿ, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.




