ಕರ್ನಾಟಕದ ಜನತೆ ಪಾಲಿಗೆ ನಿಮ್ಮ ಸರ್ಕಾರ ಎಂದೋ ಸತ್ತು ಹೋಗಿದೆ: ಆರ್.ಅಶೋಕ್ ವಾಗ್ದಾಳಿ

Political News: ಸರ್ಕಾರಿ ಆಸ್ಪತ್ರೆಯಲ್ಲಿ ಸರಿಯಾಗಿ ಔಷಧಿ ಸಿಗುತ್ತಿಲ್ಲವೆಂಬ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸರ್ಕಾರದ ಖಜಾನೆಯಲ್ಲಿ ದುಡ್ಡಿಲ್ಲ ಉಗ್ರಾಣದಲ್ಲಿ ಔಷಧಿ ಸ್ಟಾಕ್ ಇಲ್ಲ ಆಸ್ಪತ್ರೆಗಳಿಗೆ ಔಷಧಿ ಪೂರೈಕೆ ಇಲ್ಲ. ಸ್ವಾಮಿ ಸಿಎಂ ಸಿದ್ದರಾಮಯ್ಯನವರೇ, ಖಾಸಗಿ ಆಸ್ಪತ್ರೆಗಳು ಕೈಗೆಟುಕದೆ ಸರ್ಕಾರಿ ಆಸ್ಪತ್ರೆಗಳನ್ನೇ ನಂಬಿ ಚಿಕಿತ್ಸೆಗಾಗಿ ಬರುವ ಬಡ ರೋಗಿಗಳಿಗೆ ಔಷಧಿ ಇಲ್ಲ ಎಂದು ಚೀಟಿ ಬರೆದುಕೊಟ್ಟು ಹೊರಗಡೆ ಮಾರುಕಟ್ಟೆಯಲ್ಲಿ ಖರೀದಿ ಮಾಡಿ ಅಂದರೆ ಅವರು ಏನು ಮಾಡಬೇಕು? ಎಂದು ಅಶೋಕ್ ಪ್ರಶ್ನಿಸಿದ್ದಾರೆ.

ಬಡವರ ಹೆಸರು ಹೇಳಿಕೊಂಡು ಅಧಿಕಾರಕ್ಕೆ ಬಂದು ಈಗ ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ಯಾರಾಸಿಟಿಮೋಲ್ ನಂತಹ ಸಾಮಾನ್ಯ ಜ್ವರದ ಔಷಧಿಯೂ ಸಿಗದಂತಹ ಪರಿಸ್ಥಿತಿ ನಿರ್ಮಾಣ ಮಾಡಿದ್ದೀರಲ್ಲ, ನಾಚಿಕೆ ಆಗಬೇಕು ನಿಮ್ಮ ಕಾಂಗ್ರೆಸ್ ಸರ್ಕಾರಕ್ಕೆ ಎಂದು ಕಾಂಗ್ರೆಸ್ ವಿರುದ್ಧ ಆರ್.ಅಶೋಕ್ ಕಿಡಿಕಾರಿದ್ದಾರೆ.

ನಿಮ್ಮ ಸರ್ಕಾರದಲ್ಲಿ ಯಾವುದಾದರೂ ಒಂದು ಇಲಾಖೆಯಾದರೂ ನೆಟ್ಟಗೆ ಕೆಲಸ ಮಾಡುತ್ತಿದೆಯಾ? ಒಬ್ಬ ಸಚಿವರಾದರೂ ನೆಟ್ಟಗೆ ಕೆಲಸ ಮಾಡುತ್ತಿದ್ದಾರಾ? ಕರ್ನಾಟಕದ ಜನತೆ ಪಾಲಿಗೆ ನಿಮ್ಮ ಸರ್ಕಾರ ಎಂದೋ ಸತ್ತು ಹೋಗಿದೆ ಎಂದು ಆರ್.ಅಶೋಕ್ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

About The Author