Mandya: ಗ್ಯಾಸ್ ಸಿಲೆಂಡರ್ ಬೆಲೆ ಏರಿಸಿದ್ದಕ್ಕೆ ಮಂಡ್ಯದಲ್ಲಿಂದು ಜಿಲ್ಲಾ ಕಾಂಗ್ರೆಸ್ ಸಮಿತಿಯವರು ಪ್ರತಿಭಟನೆ ನಡೆಸಿದರು. ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಪ್ರತಿಭಟನೆ ನಡೆದಿದ್ದು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಲಾಗಿದೆ.
ತೋಲಗಲಿ ತೋಲಗಲಿ ಕೇಂದ್ರ ಸರ್ಕಾರ ತೋಲಗಲಿ ಎಂದು ಘೋಷಣೆ ಆಕ್ರೋಶ ವ್ಯಕ್ತಪಡಿಸಿದ್ದಲ್ಲದೇ, ಗ್ಯಾಸ್ ಬೆಲೆ ಏರಿಕೆ ಮಾಡಿ ಜನ ಸಾಮಾನ್ಯರ ಮೇಲೆ ದಬ್ಬಾಳಿಕೆ ಮಾಡ್ತಿದ್ದಾರೆ. ಮಹಿಳೆಯರಿಗೆ ಮೋದಿ ಅವರು ಅನ್ಯಾಯ ಮಾಡ್ತಿದ್ದಾರೆ. ನಿತ್ಯ ಬಳಿಕೆಯ ವಸ್ತು ಬೆಲೆ ಏರಿಕೆಯಾದರೆ ಜನ ಸಾಮಾನ್ಯರ ಜೀವನ ಹೇಗೆ.? ತಕ್ಷಣವೇ ಬೆಲೆ ಏರಿಕೆ ವಾಪಸ್ ಪಡೆಯಬೇಕು. ಇಲ್ಲದಿದ್ದರೆ ಮಹಿಳೆಯರು ಹಾಗೂ ರಾಜ್ಯದ ಜನ ತಕ್ಕ ಉತ್ತರ ಕೊಡ್ತಾರೆ ಎಂದು ಎಚ್ಚರಿಕೆ ನೀಡಿದ್ದಾರೆ. ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಸಿಡಿ ಗಂಗಾಧರ್, ಯಶೋಧ, ಚಂದಗಾಲು ವಿಜಿ,ಚನ್ನಪ್ಪ, ರಮೇಶ್ ಸೇರಿದಂತೆ ಹಲವರು ಭಾಗಿಯಾಗಿದ್ದರು.
ಇನ್ನೊಂದೆಡೆ ಮಂಡ್ಯದಲ್ಲಿ ಕನ್ನಡ ಮಾಧ್ಯಮ ಶಾಲೆಗಳ ಉಳಿಸಲು ಆಗ್ರಹಿಸಿ ಪ್ರತಿಭಟನೆ ನಡೆಸಿದ್ದು, ವಾಟಾಳ್ ನಾಗರಾಜು ನೇತೃತ್ವದಲ್ಲಿ ಕನ್ನಡಪರ ಕಾರ್ಯಕರ್ತರು ಪ್ರೊಟೆಸ್ಟ್ ಮಾಡಿದ್ದಾರೆ.
ಕನ್ನಡ ಮಾಧ್ಯಮ ಶಾಲೆಗಳಿಗೆ ಅನುದಾನ ನೀಡಲು ಆಗ್ರಹಿಸಿ,ಮಂಡ್ಯದ ಡಿಸಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ್ದು, ಸರ್ಕಾರ ಹಾಗೂ ಜನಪ್ರತಿನಿಧಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
30 ವರ್ಷಗಳಿಂದಲೂ ಕನ್ನಡ ಶಾಲೆಗಳನ್ನ ನಿರ್ಲಕ್ಷ್ಯ ಮಾಡಿದ್ದಾರೆ. ಸರ್ಕಾರದ ನಡೆ ವಿರುದ್ಧ ಮಾರ್ಚ್ 12ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ನಿರ್ಧಾರಿಸಿದ್ದಾರೆಂದು ಹೇಳಿದ್ದಾರೆ. ಅಲ್ಲದೇ ಆ ದಿನ ಕನ್ನಡ ಮಾಧ್ಯಮ ಶಾಲೆಗಳ ಬಂದ್ ಗೆ ವಾಟಾಳ್ ನಾಗರಾಜು ಕರೆ ನೀಡಿದ್ದು, ಅಂದು ಮಂಡ್ಯದಲ್ಲಿ ಹೆದ್ದಾರಿ ತಡೆ ನಡೆಸಲು ನಿರ್ಧಾರಿಸಿದ್ದೇವೆ ಎಂದಿದ್ದಾರೆ.
ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ ಹಂತ ಹಂತವಾಗಿ ಹೋರಾಟ ವಿಸ್ತರಿಸುವ ಎಚ್ಚರಿಕೆ ನೀಡಿದ್ದು, ಪ್ರತಿಭಟನೆಯಲ್ಲಿ ಕನ್ನಡಸೇನೆ ಜಿಲ್ಲಾಧ್ಯಕ್ಷ ಮಂಜುನಾಥ್, ಸೇರಿ ಹಲವರು ಭಾಗಿಯಾಗಿದ್ದರು.




