Davanagere: ಘೋಷಣೆಗೂ ಮುನ್ನವೇ ನಾಮಪತ್ರ ಸಲ್ಲಿಸಿದ ಶಾಮನೂರು ಶಿವಶಂಕರಪ್ಪ ಮೊಮ್ಮಗ ಸಮರ್ಥ್

Davanagere News: ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆಗೆ ಶಾಮನೂರು ಕುಟುಂಬದ ಕುಡಿ ಕಣಕ್ಕೆ ಇಳಿದಿದೆ. ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ್ ಶಾಮನೂರು ಅವರು ಇಂದು ನಾಮಪತ್ರ ಸಲ್ಲಿಸಿದ್ದಾರೆ.

ಸಂಸದೆ ಮತ್ತು ತಾಯಿ ಪ್ರಭಾ ಮಲ್ಲಿಕಾರ್ಜುನ್ ಜೊತೆ ಸಮರ್ಥ ಶಾಮನೂರು ಅವರು ದೇಶಿ ಸಾಂಪ್ರದಾಯಿಕ ಉಡುಗೆಯಲ್ಲಿ ಮಹಾನಗರ ಪಾಲಿಕೆ ಕಚೇರಿಗೆ ಇಂದ ಆಗಮಿಸಿ ಉಮೇದುವಾರಿಕೆ ಸಲ್ಲಿಸಿದರು. ಹೋಗುವ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಸಮರ್ಥ್​, ಕಾಂಗ್ರೆಸ್ ಬಿ ಫಾರ್ಂ ಸಿಗುತ್ತೆ ಎಂಬ ಭರವಸೆಯಲ್ಲಿ ನಾಮಪತ್ರ ಸಲ್ಲಿಕೆ ಮಾಡುತ್ತಿದ್ದೇನೆ. ಕಾಂಗ್ರೆಸ್ ಕಟ್ಟಿರುವುದೇ ಶಾಮನೂರು ಶಿವಶಂಕರಪ್ಪ ಅವರು. ಹೀಗಾಗಿ ನಾನು ಕಾಂಗ್ರೆಸ್​ನಿಂದಲೇ ನಾಮಪತ್ರ ಸಲ್ಲಿಸುತ್ತಿರುವೆ ಎಂದರು.

ಇವತ್ತು ಯುಗಾದಿ ಮತ್ತು ರಂಜಾನ್ ಇದೆ. ಎರಡು ಹಬ್ಬದ ಶುಭ ಘಳಿಗೆ ಹಿನ್ನೆಲೆಯಲ್ಲಿ ಇಂದು ನಾಮಪತ್ರ ಸಲ್ಲಿಕೆ ಮಾಡುತ್ತಿದ್ದೇನೆ. ದುರ್ಗಾದೇವಿ ಆಶೀರ್ವಾದ ಮತ್ತು ಕಾರ್ಯಕರ್ತರ ಬೆಂಬಲ ಪಡೆದು ನಾಮಪತ್ರ ಸಲ್ಲಿಸುತ್ತಿದ್ದೇನೆ. ಅಲ್ಪಸಂಖ್ಯಾತರು ಸೇರಿದಂತೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗಲಾಗುವುದು. ಸೋಮವಾರ ಅಧಿಕೃತವಾಗಿ ರಾಜ್ಯ ನಾಯಕರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಲಿದ್ದೇನೆ ಎಂದು ಸಮರ್ಥ್ ಶಾಮನೂರು ತಿಳಿಸಿದರು.

ನನಗೆ ಟಿಕೆಟ್ ಸಿಗುವ ವಿಶ್ವಾಸವಿದ್ದು, ಗೆಲ್ಲುವ ಆತ್ಮವಿಶ್ವಾಸ ಇದೆ ಎಂದು ಸಮರ್ಥ್ ಪ್ರತಿಕ್ರಿಯೆ ನೀಡಿದರು. ನಾಮಪತ್ರ ಸಲ್ಲಿಕೆ ವೇಳೆ ತಾಯಿ, ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಸೇರಿದಂತೆ ಹಲವು ಮುಖಂಡರು ಸಮರ್ಥ್ ಅವರಿಗೆ ಸಾಥ್ ನೀಡಿದ್ದರು.

About The Author