ಕೆ.ಆರ್.ಪೇಟೆ ಪಟ್ಟಣದ KSRTC ಬಸ್ ನಿಲ್ದಾಣದಲ್ಲಿ ಖಾಸಗಿ ವಾಹನಗಳ ಅತಿಕ್ರಮಣ ಹೆಚ್ಚುತ್ತಿದ್ದು, ಪ್ರಯಾಣಿಕರು ಹಾಗೂ ಬಸ್ ಸಂಚಾರಕ್ಕೆ ತೊಂದರೆ ಉಂಟಾಗುತ್ತಿದೆ.
ಬಸ್ ನಿಲ್ದಾಣದ ಒಳಗೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿಷೇಧವಿದ್ದರೂ, ನಿಯಮಗಳನ್ನು ಲೆಕ್ಕಿಸದೆ ವಾಹನಗಳು ಓಡಾಟ ನಡೆಸುತ್ತಿರುವುದು ಕಂಡುಬಂದಿದೆ. ಈ ಕುರಿತು ನಿಲ್ದಾಣದಲ್ಲಿರುವ ಅಧಿಕಾರಿಗಳು ಗಮನ ಹರಿಸದಿರುವುದಾಗಿ ಸಾರ್ವಜನಿಕರು ಆರೋಪಿಸಿದ್ದಾರೆ.
ಖಾಸಗಿ ವಾಹನಗಳ ಅಕ್ರಮ ಓಡಾಟದಿಂದ KSRTC ಬಸ್‌ಗಳ ಸರಾಗ ಸಂಚಾರಕ್ಕೆ ಅಡ್ಡಿ ಉಂಟಾಗುತ್ತಿದೆ. ಇದರಿಂದ ಅಪಘಾತ ಸಂಭವಿಸುವ ಭೀತಿ ಕೂಡ ಎದುರಾಗುತ್ತಿದೆ.
ಪ್ರಯಾಣಿಕರ ಸುರಕ್ಷತೆ ಹಾಗೂ ಸಂಚಾರ ಸುಗಮತೆಗೆ ಖಾಸಗಿ ವಾಹನಗಳ ಪ್ರವೇಶವನ್ನು ಕಟ್ಟುನಿಟ್ಟಾಗಿ ನಿಷೇಧಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಸಂಬಂಧಿಸಿದ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡು ಸಮಸ್ಯೆಗೆ ಪರಿಹಾರ ಕಂಡುಹಿಡಿಯಬೇಕಾಗಿದೆ ಎಂಬ ಒತ್ತಾಯ ಕೇಳಿಬರುತ್ತಿದೆ.
ವರದಿ : ಲಾವಣ್ಯ ಅನಿಗೋಳ




