ಪ್ರಚೋದನಾಕಾರಿ ಭಾಷಣ ಆರೋಪ: ಯತ್ನಾಳ್ ಮತ್ತು ಅನಂತ್ ಕುಮಾರ್ ಹೆಗಡೆ ವಿರುದ್ಧ ಎಫ್‌ಐಆರ್

Mandya News: ಕೆಲ ದಿನಗಳ ಹಿಂದೆ ಮಂಡ್ಯದ ಮದ್ದೂರಿನಲ್ಲಿ ನಡೆದ ಬಲಿದಾನ್ ದಿವಸ್ ಕಾರ್ಯಕ್ರಮದಲ್ಲಿ ಭಾಗವಹಿಸಿ, ಭಾಷಣ ಮಾಡಿದ್ದಕ್ಕಾಗಿ, ಬಿಜೆಪಿ ಉಚ್ಛಾಟಿತ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಅನಂತ್ ಕುಮಾರ್ ಹೆಗ್ದೆ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಕಾರ್ಯಕ್ರಮದ ವೇಳೆ ಪ್ರಚೋದನಾಕಾರಿ ಭಾಷಣ ಮಾಡಿದ ಕಾರಣಕ್ಕೆ, ಯತ್ನಾಳ್ ಮತ್ತು ಹೆಗಡೆ ವಿರುದ್ಧ ಮಂಡ್ಯದ ಮದ್ದೂರು ಪೋಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಸೋಮವಾರ ಸಂಜೆ ಮಂಡ್ಯದ ಮದ್ದೂರಿನಲ್ಲಿ ಹಿಂದೂಪರ ಸಂಘಟನೆಗಳು ಆಯೋಜಿಸಿದ್ದ ಬಲಿದಾನ್ ದಿವಸ್ ಕಾರ್ಯಕ್ರಮ ನಡೆದಿದ್ದು, ಈ ವೇಳೆ ಈ ಇಬ್ಬರೂ ನಾಯಕರು, ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ ಪ್ರಚೋದನಕಾರಿ ಭಾಷಣ ಮಾಡಿದ್ದರೆಂದು ಆರೋಪಿಸಲಾಗಿದೆ. ಹೀಗಾಗಿ ಸೆಕ್ಷನ್ 196 (1)(A)BNS ಆಕ್ಟ್ ಪ್ರಕಾರ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

About The Author