Bidar News: ಬೀದರ್ ಜಿಲ್ಲೆಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಅಂತರ ರಾಜ್ಯ ಖದೀಮರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 27 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣವನ್ನು ಜಪ್ತಿ ಮಾಡಿದ್ದಾರೆ.
ಕಾರ್ಯಾಚರಣೆಯಲ್ಲಿ 320 ಗ್ರಾಂ ಚಿನ್ನಾಭರಣಗಳು ಹಾಗೂ 690 ಗ್ರಾಂ ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಮೂರು ಆರೋಪಿಗಳನ್ನು ಬಂಧಿಸಿ, ಒಟ್ಟು 28 ಲಕ್ಷ ಮೌಲ್ಯದ ಆಭರಣಗಳನ್ನು ವಶಕ್ಕೆ ಪಡೆಯಲಾಗಿದೆ.
ಕಳ್ಳತನ ಮಾಡಿದ ಚಿನ್ನಾಭರಣಗಳನ್ನು ಬಳಿಕ ಜುವೆಲರಿ ಅಂಗಡಿಗಳಿಗೆ ಮಾರಾಟ ಮಾಡುತ್ತಿದ್ದರೆಂದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಬೀದರ್ ಪೊಲೀಸರು ಮಹಾರಾಷ್ಟ್ರಕ್ಕೆ ತೆರಳಿ ವಿಶೇಷ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಕಮಲನಗರ ಪೊಲೀಸರ ಮಹತ್ವದ ಪಾತ್ರವಿದೆ. ಒಟ್ಟಾರೆ, ಬೀದರ್ ಪೊಲೀಸರ ಈ ಕಾರ್ಯಾಚರಣೆ ಅಪರಾಧಿಗಳಿಗೆ ಎಚ್ಚರಿಕೆಯ ಸಂದೇಶವಾಗಿದೆ.




