Mandya News: ನಾಳೆ ವಿಶ್ವಪ್ರಸಿದ್ಧ ಮೇಲುಕೋಟೆ ವೈರಮುಡಿ ಬ್ರಹ್ಮೋತ್ಸವ ನಡೆಯಲಿದ್ದು, ಅದ್ಧೂರಿಯಾಗಿ ಕಾರ್ಯಕ್ರಮ ನಡೆಸಲು ಜಿಲ್ಲಾಡಳಿತ ಸಜ್ಜಾಗಿದೆ.
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮೇಲುಕೋಟೆಯಲ್ಲಿ ನೆಲೆಸಿರುವ ಚೆಲುವನಾರಾಯಣನಿಗೆ ನಾಳೆ ರಾತ್ರಿ 8 ಗಂಟೆಗೆ ವೈರಮುಡಿ ಕಿರೀಟ ಧಾರಣೆ ಮಾಡಲಾಗುತ್ತದೆ. ಉತ್ಸವಕ್ಕೆ ಬರುವ ಭಕ್ತರಿಗೆ ಸುಮಾರು 150 ಸಾರಿಗೆ ಬಸ್ ವ್ಯವಸ್ಥೆ ಮಾಡಲಾಗಿದೆ.
ಈ ಬಗ್ಗೆ ಮಾತನಾಡಿರುವ ಮಂಡ್ಯ ಡಿಸಿ ಡಾ.ಕುಮಾರ್, ವಾಹನಗಳಗೆ ಸೂಕ್ತ ಸ್ಥಳದಲ್ಲಿ ಪಾರ್ಕಿಂಗ್ ವ್ಯವಸ್ಥೆ ಕೂಡ ಮಾಡಲಾಗಿದ್ದು, ASP2, DYSP 6, PSI 29, ASI 47, HC/PC 158, ಪೊಲೀಸ್ ಸಿಬ್ಬಂದಿಗಳು 946, ಸೇರಿದಂತೆ 1210 ಸಿಬ್ಬಂದಿಗಳ ನೇಮಕ ಮಾಡಲಾಗಿದೆ.
ಕ್ಷೇತ್ರಕ್ಕೆ ಆಗಮಿಸುವ ಭಕ್ತರಿಗೆ ನಿರಂತರವಾಗಿ ಅನ್ನ ದಾಸೋಹ ವ್ಯವಸ್ಥೆ, ಶೌಚಾಲಯದ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆಯೂ ಇದೆ. ಮುಂಜಾಗ್ರತಾ ಕ್ರಮವಾಗಿ 40ಕ್ಕೂ ಹೆಚ್ಚು ಸಿಸಿ ಕ್ಯಾಮರಾಗಳ ಅಳವಡಿಕೆ ಮಾಡಲಾಗಿದೆ.
ದೇವಸ್ಥಾನದಲ್ಲಿ ವಿಶೇಷವಾಗಿ ವಿದ್ಯುತ್ ದೀಪಾಲಂಕಾರ, ಹೂವಿನ ಅಲಂಕಾರದ ವ್ಯವಸ್ಥೆ ಮಾಡಿದ್ದಾರೆ. ಹಾಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬಂದು ದೇವರ ದರ್ಶನ ಪಡೆಯುವಂತೆ ಡಿಸಿ ಮನವಿ ಮಾಡಿದ್ದಾರೆ.




