Davanagere News: ದಾವಣಗೆರೆ: ದಾವಣಗೆರೆ ನಗರದಲ್ಲಿ ರಾಜಕೀಯ ಬೆಳವಣಿಗೆಯೊಂದು ಗಮನ ಸೆಳೆದಿದೆ. ಹತ್ತಾರು ಯುವ ಕಾರ್ಯಕರ್ತರು ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಕಾರ್ಯಕರ್ತರು ದುರ್ಗಾಂಬಿಕಾ ದೇವಿಗೆ ಉರುಳು ಸೇವೆ ಸಲ್ಲಿಸುವ ಮೂಲಕ ತಮ್ಮ ಹರಕೆಯನ್ನು ತೀರಿಸಿ ಪಕ್ಷ ಬದಲಾವಣೆ ಮಾಡಿದ್ದಾರೆ.
ಈ ಸಂದರ್ಭದಲ್ಲಿ, ಅವರು ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ಅವರ ಭಾವಚಿತ್ರವನ್ನು ಹಿಡಿದುಕೊಂಡು, ಬಿಜೆಪಿ ಪಕ್ಷಕ್ಕೆ ಜೈಕಾರ ಹಾಕಿದ್ದಾರೆ.




