ಪೆಟ್ರೋಲ್-ಡೀಸೆಲ್ ಮೇಲಿನ ವಿಶೇಷ ಹೆಚ್ಚುವರಿ ಅಬಕಾರಿ ಸುಂಕ ಕಡಿತಕ್ಕೆ ಕೇಂದ್ರ ಸರ್ಕಾರ ನಿರ್ಧಾರ: ಹೆಚ್.ಡಿ.ಕುಮಾರಸ್ವಾಮಿ

Political News: ಶ್ರೀ ರಾಮನವಮಿ ಅಂಗವಾಗಿ ಪ್ರಧಾನಿ ಮೋದಿ ಭಾರತೀಯರಿಗೆ ಭರ್ಜರಿ ಗಿಫ್ಟ್ ನೀಡಿದ್ದು, ಭಾರತ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವಿಶೇಷ ಹೆಚ್ಚುವರಿ ಅಬಕಾರಿ ಸುಂಕವನ್ನು ಲೀಟರ್‌ಗೆ ₹10ರಷ್ಟು ಕಡಿಮೆ ಮಾಡಲು ನಿರ್ಧರಿಸಿದೆ.

ಈ ಬಗ್ಗೆ ಮಾಹಿತಿ ಹಂಚಿಕ“ಂಡಿರುವ ಕೇಂದ್ರ ಸಚಿವ ಕುಮಾರಸ್ವಾಮಿ ಅವರು, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ನಡುವೆ ಜಾಗತಿಕ ಕಚ್ಚಾ ತೈಲ ಬೆಲೆಗಳು ಏರುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು ಗೌರವಾನ್ವಿತ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವಿಶೇಷ ಹೆಚ್ಚುವರಿ ಅಬಕಾರಿ ಸುಂಕವನ್ನು ಲೀಟರ್‌ಗೆ ₹10ರಷ್ಟು ಕಡಿಮೆ ಮಾಡಲು ನಿರ್ಧರಿಸಿದೆ ಎಂದಿದ್ದಾರೆ.

ಇದರ ಜತೆಗೆ ದೇಶೀಯ ತೈಲದ ಸಾಕಷ್ಟು ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಪೂರೈಕೆಯಲ್ಲಿ ಸ್ಥಿರತೆಯನ್ನು ಕಾಪಾಡಿಕೊಳ್ಳಲು ಸರ್ಕಾರವು ಡೀಸೆಲ್ ಮೇಲೆ ಲೀಟರ್‌ಗೆ ₹21.5 ಮತ್ತು ವಿಮಾನಯಾನ ಇಂಧನದ ಮೇಲೆ ಲೀಟರ್‌ಗೆ ₹29.5 ರಫ್ತು ಸುಂಕವನ್ನು ವಿಧಿಸಿದೆ.

ಈ ವ್ಯೂಹಾತ್ಮಕ ನಿರ್ಣಯಗಳು ಅಂತಾರಾಷ್ಟ್ರೀಯ ಬೆಲೆ ಏರಿಳಿತದಿಂದ ರಾಷ್ಟ್ರದ ನಾಗರಿಕರನ್ನು ರಕ್ಷಿಸುವುದು, ಹಣದುಬ್ಬರದ ಒತ್ತಡಗಳನ್ನು ಕಡಿಮೆ ಮಾಡುವುದು ಸೇರಿದಂತೆ ವಿಶಾಲ ದೃಷ್ಟಿಕೋನದಲ್ಲಿ ಆರ್ಥಿಕತೆಯನ್ನು ರಕ್ಷಿಸುವ ಗುರಿಯನ್ನು ಹೊಂದಿವೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿದ್ದಾರೆ.

About The Author