Political News: ದಾವಣಗೆರೆ ಮತ್ತು ಬಾಗಲಕೋಟೆಯಲ್ಲಿ ಚುನಾವಣಾ ಕಣಾ ರಂಗೇರಿದ್ದು, ಕಾಂಗ್ರೆಸ್ ಗೆಲುವು ಸಾಧಿಸಲು ಶತಾಯ ಗತಾಯ ಪ್ರಯತ್ನಿಸುತ್ತಿದೆ. ಇಷ್ಟು ದಿನಗಳ ಕಾಲ ಕಷ್ಟವಾಗಿದ್ದ ದಾವಣಗೆರೆ ದಕ್ಷಿಣದ ಟಿಕೇಟ್ ಹಂಚಿಕೆ ಗಲಾಟೆ ಈಗ ಸರಿಯಾಗಿದೆ. ಬಂಡಾಯ ಸ್ಪರ್ಧಿಯಾಗಿ ಕಣಕ್ಕಿಳಿದಿದ್ದ ಸಾದಿಕ್ ಪೈಲ್ವಾನ್, ಸಿಎಂ ಮಾತಿಗೆ ಮಣಿದು ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ. ಈ ಮೂಲಕ ಸಿಎಂ ಸಂಧಾನ ಸಫಲವಾಗಿದೆ.
ಬೆಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿದು ಪ್ರೆಸ್‌ಮೀಟ್ ನಡೆಸಿ ಮಾತನಾಡಿರುವ ಸಿಎಂ, ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ಇಂದು ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ. ಪಕ್ಷದಲ್ಲಿ ಯಾವುದೇ ಗೊಂದಲಗಳಿಲ್ಲದ ಕಾರಣ ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ ಎಂಬ ವಿಶ್ವಾಸವಿದೆ ಎಂದಿದ್ದಾರೆ.
ಸಾದಿಕ್ ಪೈಲ್ವಾನ್ ಅವರು ನನಗೆ ಬಹಳ ವರ್ಷಗಳಿಂದ ಪರಿಚಯದವರು. ಮೈಸೂರಿನ ಕುಸ್ತಿ ಅಖಾಡಗಳಲ್ಲಿ ಅವರು ಪಾಲ್ಗೊಂಡಾಗ ಭೇಟಿಯಾಗುತ್ತಿದ್ದೆ. ಅವರು ಅಭ್ಯರ್ಥಿಯಾಗಬೇಕೆಂದು ಬಯಸುವುದು ತಪ್ಪೇನಿಲ್ಲ. ನಿನ್ನೆ 11 ಜನ ಪಕ್ಷೇತರ ಅಭ್ಯರ್ಥಿಗಳು ನಾಮಪತ್ರ ಹಿಂಪಡೆದಿದ್ದಾರೆ. ಪಕ್ಷದ ಕೋರಿಕೆ ಮೇರೆಗೆ ಸಾದಿಕ್ ಅವರು ಚುನಾವಣೆಯಿಂದ ಹಿಂದೆ ಸರಿದಿದ್ದಾರೆ. ಎಲ್ಲರಿಗೂ ಧನ್ಯವಾದಗಳು ಎಂದು ಸಿಎಂ ಹೇಳಿದ್ದಾರೆ.
ಶಾಸಕ ರಿಜ್ವಾನ್ ಅರ್ಷದ್, ಸಲೀಂ ಅಹ್ಮದ್, ನಜೀರ್ ಅಹ್ಮದ್ ಅವರು ದಾವಣಗೆರೆಗೆ ಭೇಟಿ ನೀಡಿದ್ದರು. ಅವರು ತಲುಪುವುದು ತಡವಾದ್ದರಿಂದ ನಾಮ ಪತ್ರ ಹಿಂಪಡೆಯುವಂತೆ ಮನವೊಲಿಸಲು ಸಾಧ್ಯವಾಗಲಿಲ್ಲ. ವಿಧಾನಪರಿಷತ್ ನಲ್ಲಿ ಉತ್ತರ ನೀಡಬೇಕಿದ್ದರಿಂದ ನಾನು ಖುದ್ದು ಭೇಟಿ ನೀಡಲಾಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸಾದಿಕ್ ಪೈಲ್ವಾನ್ ಅವರು ಕಾಂಗ್ರೆಸ್ ನಲ್ಲಿ ಸುಮಾರು 40 ವರ್ಷಗಳಿಂದ ಇದ್ದು, ಪಕ್ಷದ ಕಟ್ಟಾಳು. ದಾವಣಗೆರೆಯಲ್ಲಿ 70 ಸಾವಿರ ಮುಸ್ಲಿಂ ಮತದಾರರಿದ್ದು, ಸಮುದಾಯದವರು ಟಿಕೆಟ್ ಆಕಾಂಕ್ಷಿಗಳಾಗಿದ್ದರು. ಹೈಕಮಾಂಡ್ ಇದನ್ನು ಪರಿಶೀಲಿಸಿ ಮೃತರಾದವರ ಕುಟುಂಬದವರಿಗೆ ಟಿಕೆಟ್ ನೀಡುವ ಪದ್ಧತಿಯಂತೆ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ ಅವರ ಪುತ್ರ ಸಮರ್ಥ್ ಅವರಿಗೆ ಟಿಕೆಟ್ ನೀಡಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ಇಂದು ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ. ಪಕ್ಷದಲ್ಲಿ ಯಾವುದೇ ಗೊಂದಲಗಳಿಲ್ಲದ ಕಾರಣ ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ ಎಂಬ ವಿಶ್ವಾಸವಿದೆ.
ಸಾದಿಕ್ ಪೈಲ್ವಾನ್ ಅವರು ನನಗೆ ಬಹಳ ವರ್ಷಗಳಿಂದ ಪರಿಚಯದವರು.… pic.twitter.com/CStgd5T53h
— Siddaramaiah (@siddaramaiah) March 27, 2026




