Tumakuru News: ಶ್ರೀರಾಮನವಮಿ ಹಿನ್ನಲೆಯಲ್ಲಿ ತುಮಕೂರಿನ ಹನುಮಂತಪುರದಲ್ಲಿರುವ ಶ್ರೀ ಬಯಲು ಆಂಜನೇಯ ದೇವಾಲಯದಲ್ಲಿ ಪುಷ್ಪ ಬ್ರಹ್ಮ ರಥೋತ್ಸವವನ್ನು ಭಕ್ತಿಭಾವದಿಂದ ಆಚರಿಸಲಾಯಿತು.
ಮಧ್ಯಾಹ್ನ ಸುಮಾರು 2.15 ಗಂಟೆಗೆ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ಉತ್ಸವದ ವೇಳೆ ಭಕ್ತರು ರಥದ ತೇರಿಗೆ ಬಾಳೆಹಣ್ಣುಗಳನ್ನು ಎಸೆಯುವ ಮೂಲಕ ತಮ್ಮ ಇಷ್ಟಾರ್ಥಗಳನ್ನು ಕೋರಿಕೊಂಡರು. ನೂರಾರು ಭಕ್ತರು ರಥವನ್ನು ಎಳೆಯುವ ಮೂಲಕ ಭಕ್ತಿ ಪರವಶತೆಯನ್ನು ವ್ಯಕ್ತಪಡಿಸಿದರು.
ರಥೋತ್ಸವದ ವಿಶೇಷವಾಗಿ, ರಥವನ್ನು ಎಳೆಯುವ ಮುನ್ನ ಗರುಡ ದೇವಾಲಯದ ಸುತ್ತ ಮೂರು ಪ್ರದಕ್ಷಿಣೆ ಹಾಕಿದ ದೃಶ್ಯ ಗಮನ ಸೆಳೆಯಿತು.




