Tumakuru News: ತುಮಕೂರು: ಬೈಕ್ ನಿಯಂತ್ರಣ ತಪ್ಪಿ ಬಿದ್ದು ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.
ಹೆಬ್ಬೂರು ಬಳಿಯ ರಂಗನಾಥಪುರ ಗ್ರಾಮದ ಪ್ರಸಾದ್(20) ಮತ್ತು ವಸಂತ್(22) ಮೃತ ದುರ್ದೈವಿಗಳು. ತುಮಕೂರು ತಾಲೂಕಿನ ನಾಗವಲ್ಲಿ ಎಂಬಲ್ಲಿ ಈ ಘಟನೆ ನಡೆದಿದ್ದು, ಬೈಕ್ ಸವಾರ ಮತ್ತು ಹಿಂಬದಿ ಸವಾರ ಸಾವನ್ನಪ್ಪಿದ್ದಾರೆ. ರಂಗನಾಥ ಪುರದಿಂದ ತುಮಕೂರು ಕಡೆಗೆ ಬೈಕ್ ನಲ್ಲಿ ಹೋಗುವಾಗ ಅಪಘಾತ ಸಂಭವಿಸಿ, ಇಬ್ಬರ ತಲೆಗೂ ಗಂಭೀರ ಗಾಯವಾಗಿದೆ.
ತೀವ್ರ ರಕ್ತಸ್ರಾವಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆ ಸಂಬಂಧ ಹೆಬ್ಬೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮೃತ ದೇಹಗಳು ತುಮಕೂರು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದ್ದು, ಘಟನೆ ಸಂಬಂಧ ಹೆಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




