ಬಸ್ ನಿಲ್ದಾಣಕ್ಕೆ ನುಗ್ಗಿದ ಬಸ್, 2 ವರ್ಷದ ಮಗು ಮತ್ತು ಮಹಿಳೆಗೆ ಡಿಕ್ಕಿ, ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

Haveri News: ಹಾವೇರಿ: ಹಾವೇರಿ ಬಸ್ ನಿಲ್ದಾಣದಲ್ಲಿ ಆತಂಕಕಾರಿ ಘಟನೆ ನಡೆದಿದೆ. NWKSRTC ಬಸ್ ನಿಲ್ದಾಣದ ಕಾರಿಡಾರ್‌ಗೆ ನುಗ್ಗಿದ್ದು, 2 ವರ್ಷದ ಮಗು ಸೇರಿ ಮಹಿಳೆಗೆ ಗಂಭೀರ ಗಾಯವಾಗಿದೆ.

ಲಕ್ಷ್ಮೇಶ್ವರಕ್ಕೆ ತೆರಳುತ್ತಿದ್ದ ಬಸ್ ಅತಿ ವೇಗದಲ್ಲಿ ಬಸ್ ನಿಲ್ದಾಣಕ್ಕೆ ನುಗ್ಗಿಬಂದಿದ್ದು, ಬೇಕರಿ ಬಳಿ ನಿಂತಿದ್ದ ಪ್ರಯಾಣಿಕರಿಗೆ ಬಸ್ ಡಿಕ್ಕಿಯಾಗಿ ಈ ಅವಘಡ ಸಂಭವಿಸಿದೆ. ಈ ಘಟನೆ ಬಳಿಕ, ಮಗು ಮತ್ತು ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸಿ, ಚಿಕಿತ್ಸೆ ನೀಡಲಾಗುತ್ತಿದೆ.

ಈ ಅವಘಡಕ್ಕೆ ಕಾರಣರಾದ ಚಾಲಕ ಮತ್ತು ಕಂಡಕ್ಟರ್ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದು, ಹಿಡಿಶಾಪ ಹಾಕಿದ್ದಾರೆ. ಇನ್ನು ಘಟನಾ ಸ್ಥಳಕ್ಕೆ ಪೋಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಹಾವೇರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪೋಲೀಸರು ಪ್ರಕರಣ ದಾಖಲಿಸಿದ್ದಾರೆ.

About The Author