Haveri News: ಹಾನಗಲ್ ತಾಲೂಕಿನ ಬೆಳಗಾಲಪೇಟೆ ಗುಡ್ಡದ ಸರ್ಕಾರಿ ಆಸ್ತಿ ಅತಿಕ್ರಮಣ ಮಾಡಿರುವುದನ್ನು ಖಂಡಿಸಿ ಬುಧವಾರ ಹಿಂದೂ ಜಾಗರಣ ವೇದಿಕೆ ಮುಖಂಡರು ಹಾನಗಲ್ಲಿನಲ್ಲಿ ಪ್ರತಿಭಟನೆ ನಡೆಸಿದರು.
ಹೌದು ಹಾನಗಲ್ ತಾಲೂಕಿನ ಬೆಳಗಾಲಪೇಟೆಯ ರಿ.ಸರ್ವೇ ನಂ 33 ರ 8 ಎಕರೆ 32 ಗುಂಟೆ ಹುಲ್ಲುಗಾವಲು ಗುಡ್ಡವನ್ನು ಧರ್ಮದ ಹೆಸರಿನಲ್ಲಿ ಅತಿಕ್ರಮಣ ಮಾಡಲಾಗುತ್ತಿದೆ. ಈ ಬಗ್ಗೆ ಹಲವು ಬಾರಿ ತಾಲೂಕು ತಹಸೀಲ್ದಾರರ ಗಮನ ಸೆಳೆಯಲಾಗಿದೆ. ಅಲ್ಲದೆ ಇದಕ್ಕೆ ಅನಧಿಕೃತ ವಿದ್ಯುತ್ ಸಂಪರ್ಕ ನೀಡಿದ ಹೆಸ್ಕಾಂಗೂ ಕೂಡ ಮನವಿ ಸಲ್ಲಿಸಲಾಗಿದೆ. ಆದಾಗ್ಯೂ ಕೂಡ ಈ ಅತಿಕ್ರಮಣ ತೆರವು ಮಾಡುವಲ್ಲಿ ತಾಲೂಕು ಆಡಳಿತ ವಿಫಲವಾಗಿದೆ.
ಇನ್ನೂ ಕೂಡಲೇ ಅತಿಕ್ರಮಣ ಜಾಗವನ್ನು ತೆರವುಗೊಳಿಸುವಂತೆ ಒತ್ತಾಯಿಸಿ ಹಿಂದೂ ಜಾಗರಣ ವೇದಿಕೆ ಸಂಘಟನೆ ಮುಖಂಡರುಗಳು ಬುಧವಾರ ಹಾನಗಲ್ ತಹಸೀಲ್ದಾರ್ಗೆ ಮನವಿ ಸಲ್ಲಿಸಿದರು.
ಅಷ್ಟೇ ಅಲ್ಲದೇ ಒಂದು ವಾರದ ಗಡುವಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಅತಿಕ್ರಮಣ ಜಾಗವನ್ನು ತೆರವುಗೊಳಿಸದಿದ್ದರೆ, ಹಾನಗಲ್ ತಹಸೀಲ್ದಾರ್ ಕಚೇರಿ ಎದುರಿಗೆ ಅಮರಣ ಉಪವಾಸ ಆರಂಭಿಸಲಾಗುವುದು ಎಂದು ಹಿಂದೂ ಜಾಗರಣ ವೇದಿಕೆ ಸಂಘಟನೆ ಮುಖಂಡರುಗಳು ಎಚ್ಚರಿಸಿದರು.




