ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪಚುನಾವಣೆಗಳು ಕಾಂಗ್ರೆಸ್‌ಗೆ ಟಾಟಾ ಬೈಬೈ ಎಲೆಕ್ಷನ್: ಆರ್.ಅಶೋಕ್

Political News: ದಾವಣಗೆರೆ ಮತ್ತು ಬಾಗಲಕೋಟೆ ಉಪಚುನಾವಣೆ ನಡೆಯುತ್ತಿದ್ದು, ಕಾಂಗ್ರೆಸ್ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ.

ತಮ್ಮ ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಬರೆದಿರುವ ಅವರು, ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪಚುನಾವಣೆಗಳು ಕೇವಲ ಬೈ-ಎಲೆಕ್ಷನ್ ಅಲ್ಲ… ಇದು ಕಾಂಗ್ರೆಸ್ ಸರ್ಕಾರಕ್ಕೆ ಕರ್ನಾಟಕದ ಜನರು ಹೇಳುತ್ತಿರುವ “ಟಾಟಾ… ಟಾಟಾ… ಬೈ ಬೈ ಎಲೆಕ್ಷನ್!” ಕಾಂಗ್ರೆಸ್ ನಾಯಕರು “ಅನುಕಂಪದ ಅಲೆ” ಬಗ್ಗೆ ಕನಸು ಕಾಣುತ್ತಿದ್ದಾರೆ. ಆದರೆ ವಾಸ್ತವದಲ್ಲಿ ಈ ಕಾಣುತ್ತಿರುವುದು ಅನುಕಂಪದ ಅಲೆ ಅಲ್ಲ, ಜನಾಕ್ರೋಶದ ಅಲೆ! ಎಂದು ಅಶೋಕ್ ವ್ಯಂಗ್ಯವಾಡಿದ್ದಾರೆ.

ಕಳೆದ ಮೂರು ವರ್ಷಗಳಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ:

  • ಜನರ ಮೇಲೆ ತೆರಿಗೆ ಭಾರ ಹೇರಿದೆ
  • ದಿನನಿತ್ಯದ ಬಳಕೆ ವಸ್ತುಗಳು ಮತ್ತು ಸೇವೆಗಳ ಬೆಲೆ ಏರಿಕೆ ಮಾಡಿದೆ
  • ವ್ಯಾಪಕ ಭ್ರಷ್ಟಾಚಾರದಲ್ಲಿ ಮುಳುಗಿದೆ
  • ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಅಧೋಗತಿಗೆ ತಳ್ಳಿದೆ
  • ಕನ್ನಡಿಗರನ್ನು ಸಾಲದ ಸುಳಿಗೆ ಸಿಲುಕಿಸಿದೆ
  • ಅಭಿವೃದ್ಧಿಯನ್ನು ಮರೀಚಿಕೆಯಾಗಿಸಿದೆ ಎಂದು ಆರ್.ಅಶೋಕ್ ಆರೋಪಿಸಿದ್ದಾರೆ. 
    ಒಂದು ಕೈಯಲ್ಲಿ ಗ್ಯಾರಂಟಿ ಕೊಡುವ ನಾಟಕವಾಡಿ, ಇನ್ನೊಂದು ಕೈಯಲ್ಲಿ ತೆರಿಗೆ ಮತ್ತು ಬೆಲೆ ಏರಿಕೆಯಿಂದ ಜನರ ಜೇಬಿಗೆ ಕನ್ನ ಹಾಕುವ ಪಿಕ್ ಪಾಕೆಟ್ ನಡೆಯುತ್ತಿದೆ. ದಾವಣಗೆರೆ ಮತ್ತು ಬಾಗಲಕೋಟೆ ಉಪಚುನಾವಣೆ ಕೇವಲ ಎರಡು ಕ್ಷೇತ್ರಗಳ ಚುನಾವಣೆ ಅಲ್ಲ. ಇದು ದುರಾಡಳಿತ, ಭ್ರಷ್ಟಾಚಾರ ಮತ್ತು ಜನವಿರೋಧಿ ನೀತಿಗಳ ವಿರುದ್ಧ ಕನ್ನಡಿಗರು ನೀಡಲಿರುವ ಎಚ್ಚರಿಕೆಯ ಗಂಟೆ. ಜನಸಾಮಾನ್ಯರು ಈ ನಾಲಾಯಕ್ ಕಾಂಗ್ರೆಸ್ ಸರ್ಕಾರಕ್ಕೆ ಬುದ್ಧಿ ಕಲಿಸುವ ನಿರ್ಧಾರ ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರಕ್ಕೆ ಜನರಿಂದ ಬರುತ್ತಿರುವ ಸಂದೇಶ ಸ್ಪಷ್ಟ – “ಟಾಟಾ… ಟಾಟಾ… ಬೈ ಬೈ!” ಎಂದು ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ.

About The Author