Political News: ಓಲೈಕೆ, ತುಷ್ಟೀಕರಣದ ರಾಜಕಾರಣ ಬಿಟ್ಟು ಅಭಿವೃದ್ಧಿಯತ್ತ ಗಮನ ಹರಿಸಿ: ಆರ್.ಅಶೋಕ್

Political News: ಕಾಂಗ್ರೆಸ್ ಪಕ್ಷ ಅಭಿವೃದ್ಧಿಗಿಂತ ಹೆಚ್ಚು ಕೆಲಸ ಓಲೈಕೆಯಲ್ಲೇ ಕಾಲ ಕಳೆಯುತ್ತಿದ್ದಾರೆಂದು ಆರ್.ಅಶೋಕ್ ಆರೋಪಿಸಿದ್ದು, ಇನ್ನಾದರೂ ರಾಜ್ಯದ ಅಭಿವೃದ್ಧಿ ಬಗ್ಗೆ ಗಮನ ಹರಿಸಬೇಕು ಎಂದು ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ವಿಧಾನ ಸಭೆಯಲ್ಲಿಂದು ಮಾತನಾಡಿರುವ ಅವರು, ಕಾಂಗ್ರೆಸ್ ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಅವರ ಬೆಂಬಲಿಗರು ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಫೆಬ್ರವರಿ 2024ರಲ್ಲಿ ಸದನದಲ್ಲಿ ಮಾತಾನಾಡುವಾಗ ಅತಿಯಾದ ಮುಸ್ಲಿಂ ಓಲೈಕೆ, ವ್ಯಾಮೋಹ, ತುಷ್ಟೀಕರಣವೇ ಕಾಂಗ್ರೆಸ್ ಪಕ್ಷಕ್ಕೆ ಮುಂದೊಂದು ದಿನ ಮುಳುವಾಗುತ್ತೆ ಎಂದು ಭವಿಷ್ಯ ನುಡಿದಿದ್ದೆ.

ದಾವಣಗೆರೆ ದಕ್ಷಿಣ ಉಪಚುನಾವಣೆ ಸುತ್ತ ಕಾಂಗ್ರೆಸ್ ಪಕ್ಷದಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ಗಮನಿಸುತ್ತಿದ್ದರೆ, ಎರಡು ವರ್ಷಗಳ ಹಿಂದೆ ನಾನು ಸದನದಲ್ಲಿ ಹೇಳಿದ್ದು ಈಗ ನಿಜವಾಗುತ್ತಿದೆ ಎನ್ನಿಸುತ್ತಿದೆ ಎಂದು ಆರ್.ಅಶೋಕ್.

ಎಲ್ಲಿಯವರೆಗೂ ಪರ್ಯಾಯ ಆಯ್ಕೆ ಇರುವುದಿಲ್ಲವೋ ಅಲ್ಲಿಯವರೆಗೆ ಮಾತ್ರ ಮುಸ್ಲಿಮರು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುತ್ತಾರೆ ಎಂಬ ಕಟು ಸತ್ಯವನ್ನ ಕಾಂಗ್ರೆಸ್ ಪಕ್ಷ ಈಗಲಾದರೂ ಅರ್ಥ ಮಾಡಿಕೊಳ್ಳಬೇಕು ಎಂದು ಆರ್.ಅಶೋಕ್ ಹೇಳಿದ್ದಾರೆ.

ಕರ್ನಾಟಕದಲ್ಲಿ ಕಾಂಗ್ರೆಸ್ ನಾಯಕರು ಈಗಲಾದರೂ ಎಚ್ಚೆತ್ತುಕೊಂಡು, ಓಲೈಕೆ, ತುಷ್ಟೀಕರಣದ ರಾಜಕಾರಣ ಬಿಟ್ಟು ಅಭಿವೃದ್ಧಿಯತ್ತ ಗಮನ ಹರಿಸಲಿ. ಇಲ್ಲವಾದರೆ ಜಮ್ಮು ಕಾಶ್ಮೀರದಲ್ಲಿ, ಹರಿಯಾಣ, ಬಿಹಾರ ಮುಂತಾದ ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಂದಿರುವ ಗತಿಯೇ ಕರ್ನಾಟಕದಲ್ಲಿಯೂ ಬರುವುದು ನಿಶ್ಚಿತ ಎಂದು ಆರ್.ಅಶೋಕ್ ಹೇಳಿದ್ದಾರೆ.

About The Author