Political News: ಬೆಂಗಳೂರಿನಲ್ಲಿಂದು ಸಿಎಂ ಸಿದ್ದರಾಮಯ್ಯ ಪಂಚರಾಜ್ಯಗಳ ಚುನಾವಣೆ ಹಾಗೂ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶದ ಕುರಿತು ಮಾತನಾಡಿದ್ದು, ಗೆಲುವಿನ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ದಾವಣಗೆರೆಯಲ್ಲಿ ನಾನಾ ಕಾರಣದಿಂದ ಗೆಲುವಿನ ಅಂತರ ಕಡಿಮೆಯಾಗಬಹುದು ಆದರೆ ಗೆಲ್ಲುತ್ತೇವೆ.
ಅಸ್ಸಾಂನಲ್ಲಿ ನಿರೀಕ್ಷಿತ ಫಲಿತಾಂಶ ಬಂದಿದ್ದು, ಅದನ್ನು ಒಪ್ಪಿಕೊಳ್ಳುತ್ತೇವೆ. ಕೇರಳದಲ್ಲಿ ನಮ್ಮ ನಿರೀಕ್ಷೆಗಿಂತಲೂ ಹೆಚ್ಚು ಸ್ಥಾನಗಳನ್ನು ಗಳಿಸಿದ್ದೇವೆ. ಸುಮಾರು 76 ರಿಂದ 80 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಹೇಳಿದ್ದೆವು, ಆದರೆ 95 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದೇವೆ. ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ಆಡಳಿತ ವಿರೋಧಿ ಅಲೆ ಇರಬಹುದು ಎಂದು ಭಾವಿಸಿದ್ದೇನೆ.
ತಮಿಳುನಾಡಿನಲ್ಲಿ ಟಿವಿಕೆ ಪಕ್ಷ ಮುನ್ನಡೆ ಸಾಧಿಸಿದ್ದು, ಪಕ್ಷದ ಸಾರಥಿಯಾದ ವಿಜಯ್ ಅವರಿಗೆ ಅಭಿನಂದನೆಗಳು ಎಂದು ಸಿಎಂ ಸಿದ್ದರಾಾಮಯ್ಯ ವಿಶ್ ಮಾಡಿದ್ದಾರೆ.



