ಬಾಗಲಕೋಟೆಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಭರ್ಜರಿ ಗೆಲುವು ಸಾಧಿಸಿದ್ದು ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಸೋತಿದ್ದಾರೆ. ಈ ವಿಚಾರಕ್ಕೆ ಸಂಭಂಧಪಟ್ಟಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬಿ.ವೈ.ವಿಜಯೇಂದ್ರ , ಬಾಗಲಕೋಟೆಯಲ್ಲಿ ಆಗಿರುವ ಹಿನ್ನಡೆಯನ್ನು ಒಪ್ಪಿಕೊಳ್ಳುತ್ತೇವೆ. ಮತದಾರರು ಕೈಹಿಡಿಯುವ ವಿಶ್ವಾಸವಿತ್ತು. ಉಪಚುನಾವಣೆಯಲ್ಲಿ ಆದ ಹಿನ್ನಡೆ ಬಗ್ಗೆ ಪರಾಮರ್ಶೆ ಮಾಡುತ್ತೇವೆ ಎಂದಿದ್ದಾರೆ. ಇನ್ನು ಬಾಗಲಕೋಟೆಯಲ್ಲಿ ಮುಖ್ಯಮಂತ್ರಿಗಳು 15 ದಿನ ಬೀಡುಬಿಟ್ಟಿದ್ದರು. ಇಡೀ ಸಚಿವ ಸಂಪುಟವೇ ಬಾಗಲಕೋಟೆಯಲ್ಲಿ ಬೀಡು ಬಿಟ್ಟಿತ್ತು. ಉಪಚುನಾವಣೆಗಳ ಇತಿಹಾಸ ನಮ್ಮ ಕಣ್ಮುಂದೆ ಇದೆ. ಯಾವ ರೀತಿ ಸಂಘಟನೆ ಮಾಡಿ ಬಲ ತುಂಬಬೇಕು ಅಂತ ಚರ್ಚೆ ಮಾಡುತ್ತೇವೆ ಎಂದು ಹೇಳಿದ್ದಾರೆ.




