Political News: ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್ ಐಪಿಎಲ್‌ನಲ್ಲಿ ವಿಐಪಿ ಟಿಕೇಟ್ ಕೇಳುವ ರಾಜಕೀಯ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.
ಈ ಆಕ್ರೋಶಕ್ಕೂ ಕಾರಣವಿದ್ದು, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಾಗಿದ್ದ ಐಪಿಎಲ್ ಫೈನಲ್ ಪಂದ್ಯ ಗುಜರಾತ್‌ನ ನರೇಂದ್ರ ಮೋದಿ ಕ್ರಿಡಾಂಗಣಕ್ಕೆ ಶಿಫ್ಟ್ ಆಗಿದೆ.
ಹೀಗಾಗಿ ಈ ಬಗ್ಗೆ ನಿಖಿಲ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೋಶಿಯಲ್ ಮೀಡಿಯಾ ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಬರೆದಿರುವ ಅವರು, ನಮ್ಮ ರಾಜ್ಯದ ನಾಯಕರಿಗೆ ‘ಅಭಿನಂದನೆಗಳು’! ಕೇವಲ ತಮ್ಮ ವಿವಿಐಪಿ ಪಾಸ್‌ಗಳ ಹಪಾಹಪಿ ಯಿಂದಾಗಿ, ನಮ್ಮೂರಿನಲ್ಲಿ ನಡೆಯಬೇಕಿದ್ದ ಫೈನಲ್ ಪಂದ್ಯವನ್ನು ಅಹಮದಾಬಾದ್‌ಗೆ ಉಡುಗೊರೆಯಾಗಿ* ನೀಡಿದ್ದೀರಿ.
ನಾನು ಅಂದೇ ಹೇಳಿದ್ದೆ, ಇಂದೂ ಪುನರುಚ್ಚರಿಸುತ್ತಿದ್ದೇನೆ: ಕ್ರೀಡಾಂಗಣವಿರುವುದು ಕ್ರಿಕೆಟ್ ಅಭಿಮಾನಿಗಳಿಗಾಗಿ ಹೊರತು ವಿಐಪಿಗಳಿಗಾಗಿ ಅಲ್ಲ. ನಮ್ಮ ಕೆಲವು ಶಾಸಕರ ಉಚಿತ ಟಿಕೆಟ್ ವ್ಯಾಮೋಹ ದಿಂದಾಗಿ ಇಂದು ಐಪಿಎಲ್ ಫೈನಲ್ ಬೆಂಗಳೂರಿನಿಂದ ಕೈತಪ್ಪಿ ಹೋಗಿದೆ.
ಬಿಸಿಸಿಐ ತೆಗೆದುಕೊಂಡಿರುವ ಈ ನಿರ್ಧಾರ ನಮ್ಮ ಸರ್ಕಾರಕ್ಕೆ ಒಂದು ಎಚ್ಚರಿಕೆ ಗಂಟೆಯಾಗಲಿ. ಚಿನ್ನಸ್ವಾಮಿ ಕ್ರೀಡಾಂಗಣವನ್ನು ತಮ್ಮ ವೈಯಕ್ತಿಕ ಟಿಕೆಟ್ ಕೌಂಟರ್ ಮಾಡಿಕೊಂಡವರ ವರ್ತನೆಯಿಂದಾಗಿ, ಇಂದು ನಾವು ಕೇವಲ ಒಂದು ಪಂದ್ಯವನ್ನಷ್ಟೇ ಅಲ್ಲ,ರಾಷ್ಟ್ರಮಟ್ಟದಲ್ಲಿ ಬೆಂಗಳೂರಿನ ಘನತೆಯನ್ನೂ ಕಳೆದುಕೊಂಡಿದ್ದೇವೆ ಎಂದು ನಿಖಿಲ್ ಕುಮಾರ್ ಅಸಮಾಧಾನ ಹೊರಹಾಕಿದ್ದಾರೆ.




