ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಕುಪ್ಪಳ್ಳಿ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಎರಡು ಕಾರುಗಳ ನಡುವೆ ಸಂಭವಿಸಿದ ಈ ಡಿಕ್ಕಿಯಿಂದ ಕೆಲಕಾಲ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮಾಹಿತಿಯ ಪ್ರಕಾರ, ಬೊಲೆರೋ ವಾಹನವು ಓವರ್‌ಟೇಕ್ ಮಾಡಲು ಯತ್ನಿಸಿದ ವೇಳೆ ಎದುರಿನಿಂದ ಬರುತ್ತಿದ್ದ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ತೀವ್ರತೆಗೆ ಎರಡೂ ವಾಹನಗಳು ಹಾನಿಗೊಳಗಾಗಿವೆ. ಮೂವರು ಗಾಯಗೊಂಡಿದ್ದಾರೆ.
ಅಪಘಾತದಲ್ಲಿ ಮತ್ತೊಂದು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಗಂಡ, ಹೆಂಡತಿ ಹಾಗೂ ಮಗು ಗಾಯಗೊಂಡಿದ್ದು, ತಕ್ಷಣ ಸ್ಥಳೀಯರು ಹಾಗೂ ಪೊಲೀಸರು ನೆರವಿಗೆ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಗಾಯಾಳುಗಳ ಆರೋಗ್ಯ ಸ್ಥಿತಿ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ. ಘಟನೆ ಸಂಬಂಧ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.




