Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ ದಿನ ಕೋಮಾದಲ್ಲಿದ್ದರು. ಇದೀಗ ಚಿಕಿತ್ಸೆ ಫಲಿಸದೇ. ಬೆಳಗ್ಗಿನ ಜಾವ ಸುಮಾರು 3 ಗಂಟೆಗೆ ಸುಧಾಕರ್ ಇಹಲೋಕ ತ್ಯಜಿಸಿದ್ದಾರೆ.

ಯೋಜನೆ ಮತ್ತು ಸಾಂಖ್ಯಿಕ ಸಚಿವರಾಗಿದ್ದ ಡಿ.ಸುಧಾಕರ್, ಪತ್ನಿ ಹರ್ಷಿಣಿ, ಪುತ್ರ ಸುಹಾಸ್ ಮತ್ತು ಪುತ್ರಿ ಸ್ಪೂರ್ತಿ ಸೇರಿ ಹಲವು ಅಭಿಮಾನಿಗಳನ್ನು ಅಗಲಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಪಟ್ಟಣದವರಾದ ಸುಧಾಕರ್ ಅವರ ಅಂತಿಮ ದರ್ಶನಕ್ಕೆ ಅವಕಾಶವಿದ್ದು, ಡಿ.ಸುಧಾಕರ್ ಸ್ಟೇಡಿಯಂನಲ್ಲಿ ಸಕಲ ಸಿದ್ಧತೆ ಮಾಡಲಾಗುತ್ತಿದೆ.

ಸುಧಾಕರ್ ನಿಧನಕ್ಕೆ ಸಿಎಂ ಸಿದ್ದರಾಮಯಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿ ಹಲವು ಕಾಂಗ್ರೆಸ್ ನಾಯಕರು ಸಂತಾಪ ಸೂಚಿಸಿದ್ದಾರೆ.

About The Author